Home Advertisement
Home ನಮ್ಮ ಜಿಲ್ಲೆ ಧಾರವಾಡ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಕಾರ್ಪೋರೇಟರ್ ಅರೆಸ್ಟ್‌

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಕಾರ್ಪೋರೇಟರ್ ಅರೆಸ್ಟ್‌

0
28

ಧಾರವಾಡ: ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಕ್ರಿಮಿನಲ್ ಪ್ರಕರಣದ ಆರೋಪಿ ಶ್ರೀಕಾಂತ (ತಿರಕಪ್ಪ) ಜಮನಾಳನನ್ನು ಧಾರವಾಡ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶ್ರೀಕಾಂತ ಜಮನಾಳ ಕ್ರಿಮಿನಲ್ ಪ್ರಕರಣಕ್ಕಾಗಿ ಜೆಎಂಎಫ್‌ಸಿ ನ್ಯಾಯಾಲಯದಿಂದ ಶಿಕ್ಷೆಗೀಡಾಗಿದ್ದರು. ಜಾಮೀನು ಪಡೆದುಕೊಂಡು ಆ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದನು. ಈತ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡು, ಮಹಾನಗರ ಪಾಲಿಕೆ ಸದಸ್ಯ ಕೂಡ ಆಗಿದ್ದ.

ಇವನ ಮೇಲೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಸದ್ಯ 1 ಕ್ರಿಮಿನಲ್ ಕೇಸ್ ಇದೆ. ಈತ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಕೂಡ ಆಗಿದ್ದಾನೆ.

ಈತನನ್ನು ಪತ್ತೆ ಮಾಡುವ ಸಲುವಾಗಿ ಧಾರವಾಡ ಉಪನಗರ ಠಾಣೆ ಪೊಲೀಸರು ಸಾಕಷ್ಟು ಪ್ರಯತ್ನಪಡುತ್ತಿದ್ದರು. ಧಾರವಾಡ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಧಾರವಾಡ ನಗರದ ಹೊರ ವಲಯದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಈತ ಕೇಂದ್ರ ಕಾರಾಗೃಹದಲ್ಲಿದ್ದಾನೆ.