SK Home Ad
Home ನಮ್ಮ ಜಿಲ್ಲೆ ಧಾರವಾಡ ಗಣೇಶ ಹಬ್ಬ: ಹುಬ್ಬಳ್ಳಿ-ಧಾರವಾಡದಲ್ಲಿ ಸೆ. 7, 8ರಂದು ಶಾಂತಿ ಸಭೆ

ಗಣೇಶ ಹಬ್ಬ: ಹುಬ್ಬಳ್ಳಿ-ಧಾರವಾಡದಲ್ಲಿ ಸೆ. 7, 8ರಂದು ಶಾಂತಿ ಸಭೆ

0
48

ಹುಬ್ಬಳ್ಳಿ: ಸೆಪ್ಟೆಂಬರ್ 14 ರಿಂದ 25 ರವರೆಗೆ ಗಣೇಶ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಶಾಂತಿ ಸೌಹಾರ್ದ ಸಭೆ ಆಯೋಜಿಸಲಾಗಿದೆ.

ಸೆ. 7ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಇಂದಿರಾ ಗ್ಲಾಸ್ ಹೌಸ್ ಎದುರಿನ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಾಗೂ ಸೆ. 8ರಂದು ಬೆಳಗ್ಗೆ 11 ಗಂಟೆಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸಭೆ ನಡೆಯಲಿದೆ.

ಸಭೆಗೆ ಎಲ್ಲ ಧರ್ಮದ ಧರ್ಮಗುರುಗಳು, ಧಾರ್ಮಿಕ ಮುಖಂಡರು, ಮಾಧ್ಯಮ ಮಿತ್ರರು ಹಾಗೂ ಸಾರ್ವಜನಿಕರು ಹಾಜರಾಗಿ ಅಮೂಲ್ಯ ಸೂಚನೆ ನೀಡಬೇಕು ಎಂದು ಪೊಲೀಸ್ ಕಮೀಶನರ್ ಭೂಷಣ ಜಿ. ಬೋರಸೆ ಮನವಿ ಮಾಡಿದ್ದಾರೆ.