ಲೋಕಭವನ ಮರುನಾಮಕರಣಕ್ಕೆ ಸರ್ಕಾರದ ಒಪ್ಪಿಗೆ ಇಲ್ಲ

0
82

ಹುಬ್ಬಳ್ಳಿ: ರಾಜಭವನವನ್ನು ಲೋಕಭವನ ಎಂದು ಮರುನಾಮಕರಣ ಮಾಡಲು ಸರ್ಕಾರದ ಒಪ್ಪಿಗೆ ಇಲ್ಲ. ಅದು ಕೇಂದ್ರ ಗೃಹ ಸಚಿವಾಲಯದ ನಿರ್ಧಾರ ಆಗಿರಬಹುದು. ರಾಜ್ಯಪಾಲರ ಅನುಮೋದನೆಯೊಂದಿಗೆ ಇದು ಜಾರಿಯಾಗಿದೆ. ರಾಜಭವನ ಲೋಕಭವನವಾಗಲು ಹೇಗೆ ಸಾಧ್ಯ? ಆಡಳಿತಾತ್ಮಕ ದೃಷ್ಟಿಯಿಂದಲೂ ಇದು ಸರಿಯಾದುದಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಭವನವನ್ನು ಲೋಕಭವನ ಎಂದು ನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಕೇಂದ್ರದ ಈ ನಿರ್ಧಾರವನ್ನು ನಾವು ಒಪ್ಪಲ್ಲ ಎಂದರು.

ಅಧಿಕಾರ ಹಂಚಿಕೆ ವಿಚಾರದ ಸಮಸ್ಯೆ ಕಾಂಗ್ರೆಸ್‌ನಲ್ಲಿ ಇಲ್ಲ. ಆದರೂ ಸಮಸ್ಯೆ ಇದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈ ವಿಚಾರವಾಗಿ ಗಂಭೀರವಾಗಿ ಚರ್ಚೆ ಮಾಡಿದ್ದಾರೆ. ಸಮಸ್ಯೆ ಇದ್ದರೆ ಅಧಿವೇಶನ ನಂತರ ಬಗೆಹರಿಯುತ್ತದೆ. ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರು.

Previous articleಅಂಡರ್‌-19 ರಾಜ್ಯ ತಂಡಕ್ಕೆ ಧಾರವಾಡದ ರೂಹಿ ಆಯ್ಕೆ
Next articleರಾಜಿ ಮತ್ತು ಮಧ್ಯಸ್ಥಿಕೆ ವಿಧಾನದಿಂದ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥ ಸಾಧ್ಯ : ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು

LEAVE A REPLY

Please enter your comment!
Please enter your name here