Home Advertisement
Home ನಮ್ಮ ಜಿಲ್ಲೆ ಧಾರವಾಡ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿದ ಧಾರವಾಡದವರ ನೆರವಿಗೆ ಹೆ‌ಲ್ಪ್‌ಲೈನ್

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿದ ಧಾರವಾಡದವರ ನೆರವಿಗೆ ಹೆ‌ಲ್ಪ್‌ಲೈನ್

0
7

ಧಾರವಾಡ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ.

​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ: ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಇದನ್ನೂ ಓದಿ: ನಮ್ಮನ್ನು ಭಾರತಕ್ಕೆ ಕರೆಸಿಕೊಳ್ಳಲು ವ್ಯವಸ್ಥೆ ಮಾಡಿ

​ಜಿಲ್ಲಾಡಳಿತದ ಕ್ರಮಗಳು: ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ. ​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

​ಧಾರವಾಡ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ​ಧಾರವಾಡ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 0836-2445508 ಸಂಪರ್ಕಿಸಬಹುದು.

ಟೋಲ್ ಫ್ರೀ ಸಂಖ್ಯೆ 1077, ​ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.

ಇದನ್ನೂ ಓದಿ: “ನಾವಿದ್ದ ಸ್ಥಳದ ಸನಿಹದಲ್ಲಿಯೇ ಐದಾರು ಬಾರಿ ಸ್ಫೋಟದ ಶಬ್ದ”

ಪ್ರಮುಖ ಸೂಚನೆಗಳು: ​

  • ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ​ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
  • ​ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್. ಆರ್ ತಿಳಿಸಿದ್ದಾರೆ.