SK Home Ad
Home ನಮ್ಮ ಜಿಲ್ಲೆ ಧಾರವಾಡ ಹುಬ್ಬಳ್ಳಿಯಲ್ಲಿ ಗಾಳಿಪಟದ ಮಾಂಜಾ ದಾರಕ್ಕೆ ಮಹಿಳೆ ಬಲಿ

ಹುಬ್ಬಳ್ಳಿಯಲ್ಲಿ ಗಾಳಿಪಟದ ಮಾಂಜಾ ದಾರಕ್ಕೆ ಮಹಿಳೆ ಬಲಿ

0
1
ಸಾಂದರ್ಭಿಕ AI ಚಿತ್ರ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಾಳಿಪಟಕ್ಕೆ ಹಾರಿಸುವ ಮಾಂಜಾ ದಾರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮಹಿಳೆ ಮೃತಪಟ್ಟ ಧಾರುಣ ಘಟನೆ ಇಲ್ಲಿನ ಕಾರವಾರ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ನಗರದ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಹಳೇಹುಬ್ಬಳ್ಳಿ ಬೀರಬಂದ್ ಓಣಿಯ ನಿವಾಸಿ ವಿದ್ಯಾ ಮಂಜುನಾಥ ಗೌಡರ(38) ಮೃತಪಟ್ಟವರು. ಕಾರವಾರ ರಸ್ತೆಯಲ್ಲಿ ಲ್ಯಾಬ್‌ಗೆ ಕೆಲಸಕ್ಕೆಂದು ಸ್ಕೂಟಿಯಲ್ಲಿ ಹೊರಟ್ಟಿದ್ದ ವೇಳೆ ಕಾರವಾರ ರಸ್ತೆಯಲ್ಲಿ ಯಮಸ್ವರೂಪಿಯಾಗಿ ಬಂದ ಗಾಳಿಪಟದ ಮಾಂಜಾದಾರ ಕುತ್ತಿಗೆಗೆ ಸಿಲುಕಿ ಕೊಯ್ದಿದಿದೆ. ಇದರಿಂದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾರೆ.

ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.