Home Advertisement
Home ನಮ್ಮ ಜಿಲ್ಲೆ ಧಾರವಾಡ ಹುಬ್ಬಳ್ಳಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ

0
180

ಹುಬ್ಬಳ್ಳಿ: ನಗರದಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದದ ಬೆನ್ನಲ್ಲೇ ಮತ್ತೊಂದು ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯ ಕೋಮಿನ ಯುವಕನೊಬ್ಬ ಹಿಂದು ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಮುಫೀಜ್ ಮಿಯಾನವರ (23) ಎಂಬ ಯುವಕನ ವಿರುದ್ಧ ಯುವತಿ ದೂರು ನೀಡಿದ್ದಾಳೆ. ಸುಮಾರು ಐದು ವರ್ಷಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಪರಿಚಯವಾದ ಈ ಇಬ್ಬರ ನಡುವೆ ಬಳಿಕ ಸ್ನೇಹ ಬೆಳೆದಿದ್ದು, ಅದನ್ನು ದುರುಪಯೋಗ ಮಾಡಿಕೊಂಡು ಯುವಕ ಆರೋಪಿತ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವತಿ ನೀಡಿರುವ ದೂರಿನ ಪ್ರಕಾರ, ಯುವಕ ಅವಳನ್ನು ಗದಗ ರಸ್ತೆ ಮೇಲ್ಸೇತುವೆ ಸಮೀಪಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ, ಅದರ ಫೋಟೋ ಮತ್ತು ವಿಡಿಯೋಗಳನ್ನು ತೆಗೆದುಕೊಂಡಿದ್ದಾನೆ. ನಂತರ ಅವುಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ 2025ರ ನವೆಂಬರ್ ತಿಂಗಳಲ್ಲಿ ಅವಳ ಮನೆಗೆ ತೆರಳಿ ಮತ್ತೆ ದೌರ್ಜನ್ಯ ಎಸಗಿದ ಆರೋಪ ಇದೆ.

“ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕುಟುಂಬದವರನ್ನು ಜೀವಂತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.