Home ನಮ್ಮ ಜಿಲ್ಲೆ ಧಾರವಾಡ ಧಾರವಾಡ, ಕೊಡಗು ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ, ವಿವರಗಳು

ಧಾರವಾಡ, ಕೊಡಗು ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ, ವಿವರಗಳು

0

ಧಾರವಾಡ ಮತ್ತು ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಎರಡು ಜಿಲ್ಲೆಗಳಲ್ಲಿ ಉದ್ಯೋಗಾವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಧಾರವಾಡದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ, ಧಾರವಾಡ ಸ್ನಾತಕ ಇತಿಹಾಸ ಹಾಗೂ ಭೌತಶಾಸ್ತ್ರ ವಿಷಯಗಳಿಗೆ ಘಟಕ ಮಹಾವಿದ್ಯಾಲಯಗಳಿಗೆ 2025-26ನೇ ಸಾಲಿಗೆ ಸ್ನಾತಕ ಕೋರ್ಸಗಳಿಗೆ ಮೇಲಿನ ವಿಷಯಗಳ ಕಾರ್ಯಭಾರದ ಅಗತ್ಯತೆಗೆ ಅನುಗುಣವಾಗಿ ಬೋಧನೆ ಮಾಡಲು ಖಾಲಿ ಇರುವ ಪೂರ್ಣಾವಧಿ, ಅಲ್ಪಾವಧಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಕರೆದಿದೆ.

ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ 4ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಅಥವಾ ಕ.ವಿ.ವಿ. ಅಂರ್ತಜಾಲ: www.kud.ac.in ಮೂಲಕ ಪಡೆಯಬಹುದು.

ಅತಿಥಿ ಉಪನ್ಯಾಸಕರ ಹುದ್ದೆ: ಸಮಾಜ ಕಲ್ಯಾಣ ಇಲಾಖೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೋಧನೆಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಗಂಜಿಗಟ್ಟಿ ಇಲ್ಲಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ ತರಗತಿ ಪ್ರಾರಂಭವಾಗಿದ್ದು, ಪ್ರಥಮ ಪಿಯುಸಿ ವಿಷಯಗಳ (ವಿಜ್ಞಾನ ವಿಭಾಗ) ಬೋಧನೆಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10, 2025ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರಾತಿನಿದ್ಯತೆ ನೀಡಲಾಗುವುದು. ವಸತಿ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447201, 7411934749 ಹಾಗೂ 7975156674 ಗೆ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗೆ ಸಂಪರ್ಕಿಸಬಹುದು.

ಕೊಡಗಿನಲ್ಲಿ ನೇರ ಸಂದರ್ಶನ: ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಅಧೀನದಲ್ಲಿರುವ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ಅಟೆಂಡರ್-1 ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 4ರಂದು ಬೆಳಗ್ಗೆ 11.30 ಗಂಟೆಗೆ ನೇರ ಸಂದರ್ಶನವು ಜಿಲ್ಲಾ ಆಯುಷ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿ ಇಲ್ಲಿ ಹಾಜರಾಗುವಂತೆ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version