ಮಾನ್ಯಾ ಹತ್ಯೆ ಪ್ರಕರಣ: ಕರ್ತವ್ಯ ಲೋಪ, ಪಿಡಿಒ ಅಮಾನತು

0
2

ಹುಬ್ಬಳ್ಳಿ: ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಿ, ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಮತ್ತೆ ಶಾಕ್; ವಿಚಾರಣೆ 2026ಕ್ಕೆ ಮುಂದೂಡಿಕೆ

ಮಾನ್ಯಾ ಕೊಲೆಗೂ ಪೂರ್ವ ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರನ್ನು ಕರೆದು ಸಭೆ ನಡೆಸಿ, ಕೈಗೊಂಡ ಕ್ರಮಗಳ ಕುರಿತು ಠರಾವು ಪಾಸು ಮಾಡಿಲ್ಲ. ಅವರ ಶವ ಸಂಸ್ಕಾರ ಸಂದರ್ಭ ನಡೆದ ಸಮಾಲೋಚನಾ ಸಭೆಯಲ್ಲೂ ಪಾಲ್ಗೊಂಡಿಲ್ಲ. ಶವ ಸಂಸ್ಕಾರ ಸಂದರ್ಭದಲ್ಲಿ ಶಿಷ್ಟಾಚಾರ ಪಾಲಿಸುವಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಮೇಲೆ ಹುಬ್ಬಳ್ಳಿ ಗ್ರಾಮಿಣ ಪೊಲೀಸ್‌ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿತ್ತು.

Previous articleವಿನಯ್ ಕುಲಕರ್ಣಿಗೆ ಮತ್ತೆ ಶಾಕ್; ವಿಚಾರಣೆ 2026ಕ್ಕೆ ಮುಂದೂಡಿಕೆ