SK Home Ad
Home ನಮ್ಮ ಜಿಲ್ಲೆ ಧಾರವಾಡ ಮದುವೆಯಾಗಿ ಐದೇ ತಿಂಗಳು: ಹೆಲ್ಮೆಟ್‌ನಿಂದ ಹೊಡೆದು ಪತ್ನಿ ಕೊಲೆ

ಮದುವೆಯಾಗಿ ಐದೇ ತಿಂಗಳು: ಹೆಲ್ಮೆಟ್‌ನಿಂದ ಹೊಡೆದು ಪತ್ನಿ ಕೊಲೆ

0
9

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹೆಲ್ಮೆಟ್‌ನಿಂದ ಪತಿಯೊಬ್ಬ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ನಾಗರತ್ನ ಹಳೆಮನಿ (19) ಕೊಲೆಯಾದ ಮಹಿಳೆ. ಪತಿ ಶಿವರಾಜ ಕೊಲೆ ಆರೋಪಿಯಾಗಿದ್ದಾನೆ. ತಾರಿಹಾಳದ ಶಿವರಾಜ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಅವರನ್ನು ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಮದುವೆಯಾಗಿದ್ದ.

ಬುಧವಾರ ಬೆಳಿಗ್ಗೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಅದು ವಿಕೋಪಕ್ಕೆ ಹೋಗಿ ಆತ ಹಲ್ಮೆಟ್‌ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪತ್ನಿ ಕೆಳಗೆ ಬಿದ್ದು, ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿ ನಡುವೆ ಬೆಳಗ್ಗೆ ಜಗಳ ನಡೆದು ಪತಿಯೇ ಪತ್ನಿ ತಲೆಗೆ ಹೆಲ್ಮೆಟ್‌ನಿಂದ ಹೊಡೆದಿದ್ದಾನೆ ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಪತಿ ಶಿವರಾಜನನ್ನು ವಶಕ್ಕೆ ಪಡೆಯಲಾಗಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.