Home Advertisement
Home ನಮ್ಮ ಜಿಲ್ಲೆ ಧಾರವಾಡ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಲ್ಹಾದ್ ಜೋಶಿ ಮನೆಗೆ ಮುತ್ತಿಗೆ ಯತ್ನ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಲ್ಹಾದ್ ಜೋಶಿ ಮನೆಗೆ ಮುತ್ತಿಗೆ ಯತ್ನ

0
17

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಬುಧವಾರ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಶ್ವಾಪುರದ ರಮೇಶ ಭವನ ಬಳಿ ಪ್ರತಿಭಟನೆ ನಡೆಸಿದರು.

ರಮೇಶ ಭವನದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ವಶಕ್ಕೆ ಪಡೆದು, ವ್ಯಾನ್‌ನಲ್ಲಿ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರು.

ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಒತ್ತಾಯಿಸಿದರು. ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರ ಸರ್ಕಾರ ಹಾಳು ಮಾಡಿದೆ. ಇದು ದೇಶದಲ್ಲಿ ನಡೆದ ಬೃಹತ್ ಹಗರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ, ಹು-ಧಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಕೊಡಬೇಕು. ಅವರು ಸಚಿವರಾದ ನಂತರ ಎರಡನೇ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎಂದರು.