ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ಆರೋಪಿ ಫಯಾಜ್ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾನೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರದ್ದು ಮಾಡಿ ಛೀಮಾರಿ ಹಾಕಿತ್ತು. ಇಷ್ಟಾದರೂ ಮತ್ತೇ ಫಯಾಜ್ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲು ಹತ್ತಿದ್ದು, ಸೆಪ್ಟೆಂಬರ್ 3 ರಂದು ಧಾರವಾಡದ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಈಗಾಗಲೇ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ತೀರಸ್ಕೃತವಾಗಿದೆ. ಪೊಲೀಸರು ಬಂಧನ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಈ ಆಧಾರದಲ್ಲಿ ಫಯಾಜ್ ಗೆ ಜಾಮೀನು ನೀಡುವಂತೆ ಕೊರ್ಟ್ ಮುಂದೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಫಯಾಜ್ ಅರ್ಜಿ ತಿರಸ್ಕರಿಸಿತ್ತು.
ಎಪ್ರಿಲ್ 18,2024 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಕೊಲೆ ಮಾಡಿದ್ದ ಆರೋಪಿ. ಕಳೆದ 1 ವರ್ಷ 5 ತಿಂಗಳಿಂದ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್ ಜಾಮೀನಿನ ಮೇಲೆ ಹೊರಬರುವ ಪ್ರಯತ್ನ ನಡೆಸಿದ್ದಾನೆ.