ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್ ಧಾರವಾಡ ಪೀಠ ಅರ್ಜಿ ವಜಾಗೊಳಿಸಿದೆ.
ಕಳೆದ ಆಗಸ್ಟ್ 6 ರಂದು ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಹಂತಕ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಫಯಾಜ್ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈಗ ಹೈಕೋರ್ಟ್ ಸಹ ಹಂತಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಧಾರವಾಡ ಜಿಲ್ಲಾ ಕಾರಾಗೃಹದಲ್ಲಿರುವ ಫಯಾಜ್ ಕಳೆದ 1 ವರ್ಷ 5 ತಿಂಗಳ ಹಿಂದೆ, ಎಪ್ರಿಲ್ 18, 2024ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಹಿರೇಮಠನ್ನು ಕೊಲೆ ಮಾಡಿದ್ದ. ಕೊಲೆ ಮಾಡಿ ಜೈಲು ಸೇರಿರುವ ಹಂತಕನಿಗೆ ಈಗ ಜೈಲೇ ಗತಿಯಾಗಿದೆ.