SK Home Ad
Home ನಮ್ಮ ಜಿಲ್ಲೆ ಧಾರವಾಡ ಹುಬ್ಬಳ್ಳಿ: ಗಣೇಶ ಚತುರ್ಥಿಗೆ 312 ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ

ಹುಬ್ಬಳ್ಳಿ: ಗಣೇಶ ಚತುರ್ಥಿಗೆ 312 ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ

0
102

ಹುಬ್ಬಳ್ಳಿ: 2026ನೇ ಸಾಲಿನ ಗಣೇಶ ಚತುರ್ಥಿ ಪ್ರಯುಕ್ತ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 312 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ.

ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.

ಸೆ.14 ರಂದು ಗಣೇಶ ಹಬ್ಬವಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ಸ್ಥಳಗಳಿಂದ ಸ್ವಊರುಗಳಿಗೆ ತೆರಳಲು ಸೆ.11 ರಿಂದ 13 ರವರೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹಬ್ಬದ ನಂತರ ಸೆ.14 ಮತ್ತು ನಂತರದ ದಿನಗಳಲ್ಲಿ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಪ್ರಯಾಣಿಕರು ಈ ಸೌಲಭ್ಯದ ಸುರಕ್ಷಿತ ಪ್ರಯಾಣ ಕೈಗೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.