Home Advertisement
Home ನಮ್ಮ ಜಿಲ್ಲೆ ಧಾರವಾಡ ಹುಬ್ಬಳ್ಳಿಯಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರ

ಹುಬ್ಬಳ್ಳಿಯಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರ

0
8


ಹುಬ್ಬಳ್ಳಿ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಮಾರ್ಚ್ 01 ರಿಂದ ( ಭಾನುವಾರದಂದು) ಶ್ರೀ ಸಿದ್ದಾರೂಢ ಸ್ವಾಮೀಜಿ (ಎಸ್‌ಎಸ್‌ಎಸ್) ಹುಬ್ಬಳ್ಳಿ ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ವರೆಗೆ ಏಕಮುಖ ಕಾಯ್ದಿರಿಸದ (Unreserved) ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.

ಎಸ್‌ಎಸ್‌ಎಸ್ ಹುಬ್ಬಳ್ಳಿ – ಸಿಎಸ್ಎಂಟಿ ಮುಂಬೈ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ – 07344) ಭಾನುವಾರ ರಾತ್ರಿ 7:45ಕ್ಕೆ ಹುಬ್ಬಳ್ಳಿಯಿಂದ ಹೊರಡಲಿದ್ದು, ಮರುದಿನ ಮಧ್ಯಾಹ್ನ 1:45 ಗಂಟೆಗೆ ಸಿಎಸ್ಎಂಟಿ ಮುಂಬೈ ತಲುಪಲಿದೆ.

ಈ ವಿಶೇಷ ರೈಲು ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ಲೋನಾವಾಲಾ, ಕರ್ಜತ್, ಕಲ್ಯಾಣ್ ಮತ್ತು ದಾದರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ಈ ರೈಲು ಒಟ್ಟು 19 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 15 ಸಾಮಾನ್ಯ ದ್ವಿತೀಯ ದರ್ಜೆ/ಸ್ಲೀಪರ್ ಕ್ಲಾಸ್ ಬೋಗಿಗಳು, 02 ಎಸಿ ಬೋಗಿಗಳು (ಎಸಿ ಬೋಗಿಗಳು ಬೀಗ ಹಾಕಿದ ಸ್ಥಿತಿಯಲ್ಲಿರುತ್ತವೆ) ಮತ್ತು 02 ಲಗೇಜ್ ಕಮ್ ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.