ಹುಬ್ಬಳ್ಳಿ: 2025-26ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಹೊರಬಿದ್ದಿದೆ. ಕಳೆದ ವರ್ಷಕ್ಕಿಂತ ಈ ಬಾರಿಯ ಫಲಿತಾಂಶ ಶೇ. 12.5 ರಷ್ಟು ಹೆಚ್ಚಳವಾಗಿದೆ.
ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದು, ಒಟ್ಟಾರೆ 84 ಪ್ರತಿಶತ ಫಲಿತಾಂಶವಾಗಿದೆ. ಶೇ. 100 ಅಂಕ ಸಾಧಿಸಿರುವ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರು ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮನ್ಯು ಎಸ್ ಶೆಟ್ಟಿ, ನಂದನ್ ನಾಯಕ್ 600ಕ್ಕೆ 598 ಅಂಕಗಳನ್ನು ಪಡೆದು ಟಾಪರ್ ಆಗಿದ್ದಾರೆ.
ಕಲಾ ವಿಭಾಗದಲ್ಲಿ ಬಳ್ಳಾರಿಯ ಕೊಟ್ಟೂರಿನ ಇಂದೂ ಕಾಲೇಜು ವಿದ್ಯಾರ್ಥಿ ಅರ್ಚನಾ 600ಕ್ಕೆ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.























