ನವಲಗುಂದ: ತಾಲೂಕಿನ ಗುಮ್ಮಗೋಳ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮದಿನ ಹಾಗೂ ಭಾರತ ಸೇವಾದಳ ಸಪ್ತಾಹದ ಸಮಾರೋಪ ಸಮಾರಂಭ ಜರುಗಿತು
ಕಾರ್ಯಕ್ರಮ ಉದ್ಘಾಟಿಸಿದ ಸೇವಾದಳದ ತಾಲೂಕು ಅಧ್ಯಕ್ಷ ಮಂಜುನಾಥ ಕಾಲವಾಡ ಮಾತನಾಡಿ, “ಸೇವಾದಳವು ಮಕ್ಕಳಲ್ಲಿ ಶಿಸ್ತು ಹಾಗೂ ದೇಶಪ್ರೇಮ ಬೆಳೆಸುತ್ತದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಈ ಸೌಲಭ್ಯಗಳ ಸದುಪಯೋಗ ಪಡೆಯಬೇಕು” ಎಂದರು. ಮುಖ್ಯೋಪಾಧ್ಯಾಯ ಎಂ.ಡಿ. ಚುಳಕಿ ಮಾತನಾಡಿ, ಪೋಷಕರು ಮನೆಯಲ್ಲಿ ಮಕ್ಕಳಿಗೆ ಕಲಿಕೆಯ ವಾತಾವರಣ ನಿರ್ಮಿಸಿಕೊಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಉಮೇಶಗೌಡ ಮರೆಪ್ಪಗೌಡ್ರ ವಹಿಸಿದ್ದರು. ವಿವಿಧ ವೇಷಭೂಷಣ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.






















