ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರದ ಅಪರಾಧ ಮತ್ತು ಕಾನೂನು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ಶ್ರುತಿ ಎನ್.ಎಸ್. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಗುಪ್ತದಳದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಮಂಗಳವಾರ ಡಿಸಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. 2019ನೇ ಐಪಿಎಸ್ ರ‍್ಯಾಂಕ್‌ನ ಅಧಿಕಾರಿಯಾಗಿದ್ದ ಅವರು, ಈ ಮೊದಲು ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಡಿಸಿಪಿ ಮಹಾನಿಂಗ ನಂದಗಾವಿ ಅವರ ವರ್ಗಾವಣೆಯಿಂದ ಡಿಸಿಪಿ ಹುದ್ದೆ ಖಾಲಿಯಾಗಿತ್ತು.






















