SK Home Ad
Home ನಮ್ಮ ಜಿಲ್ಲೆ ಧಾರವಾಡ ದೀಪಾವಳಿಗೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

ದೀಪಾವಳಿಗೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

0
24

ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಓಡಿಸಲಿದೆ. ಎರಡೂ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್ ಸಂಚರಿಸಲಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕಣಮಡಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿಗೆ (ರೈಲು ಸಂಖ್ಯೆ – 06551) ವಿಶೇಷ ಎಕ್ಸ್‌ಪ್ರೆಸ್ ರೈಲು ನ. 7 ಮತ್ತು 9 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿಯಿಂದ ಬೆಂಗಳೂರಿಗೆ (ರೈಲು ಸಂಖ್ಯೆ – 06552) ವಿಶೇಷ ಎಕ್ಸ್‌ಪ್ರೆಸ್ ರೈಲು ನ. 8 ಮತ್ತು 10 ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಗ್ಗೆ 5 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲುಗಳು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೊಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ ಎಂದಿದ್ದಾರೆ.

ರೈಲಿನಲ್ಲಿ ಒಟ್ಟು 20 ಬೋಗಿಗಳಿದ್ದು, ಎಸಿ 2-ಟೈರ್, ಎಸಿ 3-ಟೈರ್, ಸ್ಲೀಪರ್, ಜನರಲ್ ಬೋಗಿಗಳ ಸೌಲಭ್ಯ ಇರಲಿದೆ ಎಂದು ತಿಳಿಸಿದ್ದಾರೆ.