ಧಾರವಾಡದಲ್ಲಿ ಮತ್ತೆ ಪ್ರತಿಭಟನೆಗೆ ಸಜ್ಜಾದ ವಿದ್ಯಾರ್ಥಿಗಳು

ಧಾರವಾಡ: ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರ, ಪರೀಕ್ಷಾ ಅಕ್ರಮ ಹಾಗೂ ಲೋಪದೋಷಗಳನ್ನು ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 18ರಂದು ಧಾರವಾಡದ ಮಿಚಿಗನ್ ಕಾಂಪೌಂಡ್ ಮೈದಾನದಲ್ಲಿ ಅನಿರ್ದಿಷ್ಟಾವಧಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ್ ಹೇಳಿದರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಕೇಳಲಾಗಿದೆ. ಆದರೆ, ಪೊಲೀಸ್ ಆಯುಕ್ತರು ಸತ್ಯಾಗ್ರಹಕ್ಕೆ ಅನುಮತಿ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು … Continue reading ಧಾರವಾಡದಲ್ಲಿ ಮತ್ತೆ ಪ್ರತಿಭಟನೆಗೆ ಸಜ್ಜಾದ ವಿದ್ಯಾರ್ಥಿಗಳು