ಹುಬ್ಬಳ್ಳಿ: ಬಿಜೆಪಿಯವರಿಗೆ ಮುಖ್ಯಮಂತ್ರಿ ಬದಲಾವಣೆ ಮಾಡಿ ಮಾಡಿ ಅಭ್ಯಾಸ. ಅವರಿಗೆ ಯಾವತ್ತೂ ಬಹುಮತ ಸಿಕ್ಕಿಲ್ಲ. ಆಪರೇಷನ್ ಕಮಲ ಮಾಡಿ ಸರಕಾರ ರಚನೆ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಲೇವಡಿ ಮಾಡಿದರು.
ಗುರುವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಿಜೆಪಿಯವರಲ್ಲಿ ಒಂದೇ ಅವಧಿಯಲ್ಲಿ 3 ಮುಖ್ಯಮಂತ್ರಿಗಳು ಬದಲಾದರು. ಬಿಜೆಪಿಯಲ್ಲಿದ್ದ ಪದ್ಧತಿ ಕಾಂಗ್ರೆಸ್‌ನಲ್ಲಿದೆ ಎಂದು ತಿಳಿದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ: ಅಂದ್ಲೆ ಜಗದೀಶ್ವರಿಯ ಮೊರೆ ಹೋದ ಡಿಸಿಎಂ ಡಿ.ಕೆ. ಶಿವಕುಮಾರ್
ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದಾಗ ಸಿಎಂ ಬದಲಾವಣೆ ಬಗ್ಗೆ ಮಾತನಾಡಬೇಕು. ಆ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ನಮ್ಮ ಪಕ್ಷ ಹೈಕಮಾಂಡ್ ಪಕ್ಷ. ಏನೇ ಇದ್ದರೂ ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಇತಿಹಾಸ ಇದೆ. ಹೈಕಮಾಂಡ್ ಹಾಕಿದ ಗೆರೆ ನಾವು ದಾಟಲ್ಲ. ನಾವೆಲ್ಲರೂ 2028ರ ವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು ಎಂದು ಬಯಸುತ್ತೇವೆ ಎಂದರು.























