ಧಾರವಾಡ ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ವಿವಿಧ ಮತಗಟ್ಟೆಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಪ್ರಕ್ರಿಯೆ ಶುಕ್ರವಾರ ನಡೆಯುತ್ತಿದ್ದು, ಧಾರವಾಡ ಜಿಲ್ಲೆಯಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಶೇ.27.17ರಷ್ಟು ಮತದಾನ ದಾಖಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 35,119 ಮತದಾರರು ನೋಂದಾಯಿಸಿಕೊಂಡಿದ್ದು, ಮಧ್ಯಾಹ್ನದ ವೇಳೆಗೆ 9,543 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 5,836 ಪುರುಷರು ಹಾಗೂ 3,707 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಹುಬ್ಬಳ್ಳಿಯ ವಿವಿಧ ಮತಗಟ್ಟೆಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಹುಬ್ಬಳ್ಳಿಯ ಕೇಶ್ವಾಪುರದ ಫಾತೀಮಾ ಶಾಲೆಯ ಮತಗಟ್ಟೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ ಚಲಾಯಿಸಿದರು.
ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಕರ್ನಾಟಕ ಕಾಲೇಜು ಮ್ಯಾನೇಜ್‌ಮೆಂಟ್, ವಿದ್ಯಾರ್ಥಿ ಮತ್ತು ಕಂಪ್ಯೂಟರ್ ವಿಜ್ಞಾನ ಹಾಗೂ ಬಿಬಿಎ ಕಟ್ಟಡದ ಕೊಠಡಿ ಸಂಖ್ಯೆ 2ರಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಪಶ್ಚಿಮ ಪದವೀಧರ ಕ್ಷೇತ್ರವು ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ. ಕ್ಷೇತ್ರದಾದ್ಯಂತ ಅಕ್ಟೋಬರ್ 23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಿಗದಿಯಾಗಿದೆ.
- ಹುಬ್ಬಳ್ಳಿ ಮಾಂಜಾ ದಾರ ದುರಂತ: ರಾಜ್ಯದಲ್ಲಿ ಮಾರಕ ದಾರ ನಿಷೇಧಕ್ಕೆ ಸರ್ಕಾರದ ಮಹತ್ವದ ನಿರ್ಧಾರ
- ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಮಧ್ಯಾಹ್ನ 12 ಗಂಟೆಗೆ ಶೇ.27.17ರಷ್ಟು ಮತದಾನ
- ದಾಂಡೇಲಿ ಕಾಂಗ್ರೆಸ್ನಲ್ಲಿ ಅಧ್ಯಕ್ಷ ಪಟ್ಟಕ್ಕೆ ಪೈಪೋಟಿ: 9 ಮಂದಿ ಕಣಕ್ಕೆ
- EU ಕಾರ್ಬನ್ ನೀತಿಗೆ ತೀವ್ರ ವಿರೋಧ! : ಬರ್ಲಿನ್ ವೇದಿಕೆಯಲ್ಲಿ ಭಾರತದ ಖಡಕ್ ನಿಲುವು!
- 🚨 ವೆಬ್ಸೈಟ್ ನಿರ್ವಾಹಕರೇ ಎಚ್ಚರ: ‘PHP2Shell’ ದೋಷದಿಂದ ಲಕ್ಷಾಂತರ ಸೈಟ್ಗಳು ಅಪಾಯದಲ್ಲಿ!





















