Home ನಮ್ಮ ಜಿಲ್ಲೆ ಧಾರವಾಡ ಧರ್ಮಸ್ಥಳ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಪಾತ್ರ; ಸೊರಕೆ

ಧರ್ಮಸ್ಥಳ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಪಾತ್ರ; ಸೊರಕೆ

0

ಹುಬ್ಬಳ್ಳಿ: “ಧರ್ಮಸ್ಥಳ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು?. ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು?. ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಮಾಡುತ್ತಿದ್ದಾರೆ” ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.

ಹುಬ್ಬಳ್ಳಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ?” ಎಂದು ಪ್ರಶ್ನಿಸಿದರು.

“ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್‌ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್‌ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ಶೀಘ್ರ ವಾಸ್ತವಾಂಶ ಹೊರಬರಲಿದೆ” ಎಂದು ಹೇಳಿದರು.

ಹುಬ್ಬಳ್ಳಿ ರೌಡಿಗಳ ಗಡಿಪಾರು: ಗೌರಿ-ಗಣೇಶ, ಈದ್ ಮಿಲಾದ ಹಬ್ಬದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 22 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 12 ಪೊಲೀಸ್ ಠಾಣೆ ವ್ಯಾಪ್ತಿಯ 22 ಜನರನ್ನು 9 ವಲಯದ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಡಿಗೇರಿ, ಕಸಬಾಪೇಟೆ ಠಾಣೆ ತಲಾ 4, ಹಳೇಹುಬ್ಬಳ್ಳಿ 3, ಶಹರ ಉಪನಗರ ತಲಾ ಇಬ್ಬರು ಸೇರಿ ಗಡಿಪಾರು ಮಾಡಲಾಗಿದೆ. ಇಲ್ಲಿಯವರೆಗೆ 105 ಜನರನ್ನು ಗಡಿಪಾರು ಮಾಡಲಾಗಿದೆ ಎಂದರು.

NO COMMENTS

LEAVE A REPLY

Please enter your comment!
Please enter your name here

Exit mobile version