Home ನಮ್ಮ ಜಿಲ್ಲೆ ಗದಗ ಶಾಸಕ ಲಮಾಣಿ ಬಂಧನ: ಲಕ್ಷ್ಮೇಶ್ವರದಲ್ಲಿ ಭಾರೀ ಪ್ರತಿಭಟನೆ

ಶಾಸಕ ಲಮಾಣಿ ಬಂಧನ: ಲಕ್ಷ್ಮೇಶ್ವರದಲ್ಲಿ ಭಾರೀ ಪ್ರತಿಭಟನೆ

0
ಶಾಸಕ ಲಮಾಣಿ ಬಂಧನ: ಲಕ್ಷ್ಮೇಶ್ವರದಲ್ಲಿ ಭಾರೀ ಪ್ರತಿಭಟನೆ

ಗದಗ(ಲಕ್ಷ್ಮೇಶ್ವರ): ಐದು ಲಕ್ಷ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದು, ಕಾಂಗ್ರೆಸ್ ಷಡ್ಯಂತ್ರದಿಂದ ಎಂದು ಆರೋಪಿಸಿ ಬುಧವಾರ ಅವರ ಅಭಿಮಾನಿ ಬಳಗ ಹಾಗೂ ಬಂಜಾರ ಸಮಾಜದವರು ಲಕ್ಷ್ಮೇಶ್ವರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀ ಸೋಮೇಶ್ವರ ತೇರಿನಮನೆ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶಾಸಕರ ಬಂಧನವನ್ನು ಖಂಡಿಸಿದರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು.

ಇದನ್ನೂ ಓದಿ: ಮಕ್ಕಳ ರಕ್ಷಣೆ: ಅಸಭ್ಯ ವಿಷಯ ಪ್ರಸಾರ ಮಾಡಿದ 5 OTTಗಳು ಬ್ಯಾನ್

ಕಾಂಗ್ರೆಸ್ ಪಕ್ಷ ಬಂಜಾರ ಸಮಾಜ ತುಳಿಯುವ ಕೆಲಸ ಮಾಡುತ್ತಿದೆ. ಶಾಸಕರನ್ನು ಬಂಧಿಸಿ ಮಟ್ಟ ಹಾಕುವ ಹುನ್ನಾರ ಮಾಡಿದೆ. ಇಂಥ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.