SK Home Ad
Home ನಮ್ಮ ಜಿಲ್ಲೆ ಹಾಸನ ಮೀನು ಹಿಡಿಯಲು ಹೋಗಿ ಜಲಸಮಾಧಿಯಾದ ಗೆಳೆಯರು

ಮೀನು ಹಿಡಿಯಲು ಹೋಗಿ ಜಲಸಮಾಧಿಯಾದ ಗೆಳೆಯರು

0
6

ಹಾಸನ: ಮೀನು ಹಿಡಿಯಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಗೊರೂರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸಿಡ್ಲುಹೊಸಳ್ಳಿ ಗ್ರಾಮದ ಪರಮೇಶ್ (43) ಹಾಗೂ ಹಿರಗನಹಳ್ಳಿ ಗ್ರಾಮದ ಪುಟ್ಟರಾಜು (45) ಎಂದು ಗುರುತಿಸಲಾಗಿದೆ.

ಆಕಸ್ಮಿಕವಾಗಿ ಒಬ್ಬರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಲು ಮುಂದಾದ ಮತ್ತೊಬ್ಬರೂ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರಾತ್ರಿಯಾದರೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶುಕ್ರವಾರ ಬೆಳಗ್ಗೆ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಇಬ್ಬರೂ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಗೊರೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಕೆಲವೇ ಗಂಟೆಗಳಲ್ಲಿ ಇಬ್ಬರ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.