SK Home Ad
Home ನಮ್ಮ ಜಿಲ್ಲೆ ಹಾವೇರಿ ಕಬ್ಬಿನ ದರ ಘೋಷಿಸುವವರೆಗೂ ಡಿಸಿ ಕಚೇರಿ ಗೇಟ್ ಬಂದ್

ಕಬ್ಬಿನ ದರ ಘೋಷಿಸುವವರೆಗೂ ಡಿಸಿ ಕಚೇರಿ ಗೇಟ್ ಬಂದ್

0
28

ಹಾವೇರಿ: ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರೈತ ಮುಖಂಡ ಚೂನ್ನಪ್ಪ ಪೂಜೇರಿ, ಕಬ್ಬಿನ ದರ ಘೋಷಣೆಯಾಗುವವರೆಗೂ ಜಿಲ್ಲಾಧಿಕಾರಿ ಕಚೇರಿಯ ಗೇಟ್ ತೆರೆಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು.

ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿಯೇ ಎಲ್ಲೂ ಇಲ್ಲದ ಶುಗರ್ ಲಾಬಿ ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಕಾರ್ಖಾನೆ ಮಾಲೀಕರ ಹಿತಾಸಕ್ತಿಗೆ ಮಣೆ ಹಾಕುವ ಮೂಲಕ ಜಿಲ್ಲೆಯ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಬ್ಬಿನ ದರ ನಿಗದಿ ವಿಚಾರದಲ್ಲಿ ಕಾರ್ಖಾನೆ ಮಾಲಿಕರು ಮೊಂಡುತನದ ಧೋರಣೆ ಅನುಸರಿಸುತ್ತಿದ್ದಾರೆ. ರೈತರ ಬೇಡಿಕೆಗೆ ಸ್ಪಂದಿಸುವ ಬದಲು ತಮ್ಮದೇ ನಿರ್ಧಾರವನ್ನು ರೈತರ ಮೇಲೆ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕರ ಮಾತು ಕೇಳುವವರಿಗೆ ರೈತರ ಪರವಾಗಿ ನಿಲ್ಲುವ ತಾಕತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕಾದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಾರ್ಖಾನೆ ಮಾಲೀಕರ ಮನವೊಲಿಸಿ ರೈತರಿಗೆ ನ್ಯಾಯ ಕೊಡಿಸುವ ಶಕ್ತಿ ಸಚಿವರಿಗೆ ಇಲ್ಲದಂತಾಗಿದೆ. ರೈತರ ಸಮಸ್ಯೆ ಇತ್ಯರ್ಥವಾಗಬೇಕಾದರೆ ಮುಖ್ಯಮಂತ್ರಿ ಅವರೇ ಮಧ್ಯಪ್ರವೇಶಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.‌

ಕಬ್ಬಿನ ಬೆಲೆ ಘೋಷಣೆಯಾಗುವವರೆಗೂ ಜಿಲ್ಲಾಧಿಕಾರಿ ಕಚೇರಿಯ ಗೇಟ್ ತೆರೆಯುವುದಿಲ್ಲ. ರೈತರ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.