ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಗುರುವಾರ ನಡೆದಿದೆ.
ಚಳಗೇರಿ ಟೋಲ್ ಸಮೀಪದ ನಿಸರ್ಗ ಡಾಬಾ ಎದುರು ಈ ಭೀಕರ ಅಪಘಾತ ಸಂಭವಿಸಿದೆ. ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಕಾರು ಚಾಲಕ ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾಬಾಯಿ (51) ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಮಾಹಿತಿ ತಿಳಿದು ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಖನಿಜ ಕ್ಷೇತ್ರಕ್ಕೆ ಹೊಸ ದಿಕ್ಕು: 35 ವರ್ಷಗಳ ತೆರಿಗೆ ಸಂಘರ್ಷಕ್ಕೆ ಅಂತ್ಯ ಹಾಡುತ್ತಿದೆಯೇ 2026ರ ಮಸೂದೆ?
- ದಾವಣಗೆರೆ: ದಂಪತಿ ಸೇರಿ 2 ಮಕ್ಕಳು ನಾಪತ್ತೆ- CCTVಯಲ್ಲಿ ದೃಶ್ಯ ಸೆರೆ
- ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸಾವು, ಮೂವರಿಗೆ ಗಾಯ
- ವಿಶ್ವದ ಅತಿ ಎತ್ತರದ ಸೇತುವೆ ಮೇಲೂ ‘ವಂದೇ ಭಾರತ್’ ವೇಗ ಏರಿಕೆ!
- ದಕ್ಷಿಣ ವಲಯ ಮಂಡಳಿ ಸಭೆ: ಕರ್ನಾಟಕದ ಧ್ವನಿ ಮೊಳಗಿಸಿದ ಡಿಕೆಶಿ






















