Home Advertisement
Home ನಮ್ಮ ಜಿಲ್ಲೆ ಹಾವೇರಿ ಇಂಡಿ ಒಕ್ಕೂಟಕ್ಕೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ

ಇಂಡಿ ಒಕ್ಕೂಟಕ್ಕೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ

0
5

ಹಾವೇರಿ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯವಾಗಿ ಸೋತರೂ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡದೇ ಭಂಡತನ ತೋರುತ್ತಿರುವ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪ್ರತಿಯೊಂದರಲ್ಲೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ. ಅವರು ಸಂವಿಧಾನದ ಪ್ರಕಾರ ಮಹಿಳೆಯರು, ಬಡವರು, ಸಾಮಾನ್ಯ ಜನರನ್ನು ರಕ್ಷಣೆ ಮಾಡಿಲ್ಲ ಎಂದರು.

ಈಗ ಟಿಎಂಸಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡರೂ, ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಭಂಡತನ ತೋರುತ್ತಿದ್ದು, ಅವರು ಪಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ. ಅವರು ಯಾವಾಗಲೂ ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಅದು ಈಗ ಬಹಿರಂಗಗೊಂಡಿದೆ ಎಂದರು.

ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದರು.