SK Home Ad
Home ನಮ್ಮ ಜಿಲ್ಲೆ ಹಾವೇರಿ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಶಾಸಕ

ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಶಾಸಕ

0
8

ರಾಣೇಬೆನ್ನೂರು: ಸಂಚಾರ ನಿಯಮ ಉಲ್ಲಂಘಿಸಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದ ಸ್ಥಳೀಯ ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ದಂಡ ವಿಧಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಪೊಲೀಸ್ ಇಲಾಖೆಯಿಂದ ನೋಟಿಸ್ ಬಂದಿದ್ದು, ಶಾಸಕರು ದಂಡವನ್ನು ಪಾವತಿಸಿದ್ದಾರೆ.

ನಗರದಲ್ಲಿ ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆಗಳಿಗೆ ಬೆಂಗಳೂರಿನ ಶೀ ಫಾರ್ ಸೊಸೈಟಿ ವತಿಯಿಂದ ಕಂಪ್ಯೂಟರ್ ಲ್ಯಾಬ್ ವಿತರಣೆಯ ಅಂಗವಾಗಿ ಆಯೋಜಿಸಿದ್ದ ಬೈಕ್ ಜಾಥಾದಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದರು.

ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಅವರಿಗೆ ದಂಡ ಪಾವತಿಸುವಂತೆ ನೋಟಿಸ್ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಪ್ರಕಾಶ್ ಕೋಳಿವಾಡ, ಪೊಲೀಸ್ ಇಲಾಖೆ ನನಗೆ ನೋಟಿಸ್ ನೀಡಿದೆ. ನಾನು ಅದನ್ನು ಗೌರವಿಸುತ್ತೇನೆ. ನನ್ನಿಂದ ತಪ್ಪಾಗಿದೆ, ತಪ್ಪನ್ನು ಒಪ್ಪಿಕೊಂಡಿದ್ದೇನೆ. ವಿಧಿಸಲಾದ ದಂಡವನ್ನೂ ಪಾವತಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಾಸಕ ರಾಜನಲ್ಲ, ಜನರ ಸೇವಕ ಮತ್ತು ಸಾರ್ವಜನಿಕ ಸೇವಕ. ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.