ಹಾವೇರಿ: ಖಾಸಗಿ ಬಸ್ ಪಲ್ಟಿ, 2 ಸಾವು, 6 ಜನರಿಗೆ ಗಾಯ

0
37

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 6 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಈ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕಿ ಅರ್ನವಿ (11) ಹಾಗೂ ಯಶ್ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬಸ್ ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಹೊರಟಿತ್ತು ಎಂಬ ಮಾಹಿತಿ ಇದೆ. ಹಾವೇರಿ ಜಿಲ್ಲೆಯ ಮೊಟೇಬೆನ್ನೂರು ಗ್ರಾಮದ ಬಳಿ ಕಾರು ಅಡ್ಡ ಬಂದಿದ್ದರಿಂದ ಅದನ್ನು ತಪ್ಪಿಸಲು ಬ್ರೇಕ್ ಹಾಕಿದಾಗ, ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತ ನಡೆದ ಸ್ಥಳಕ್ಕೆ ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ಭೇಟಿ ನೀಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಗಾಯಾಳುಗಳ ರಕ್ಷಣಾ ಕಾರ್ಯ ನಡೆಸಿದ್ದಾರೆ.ಈ ಅಪಘಾತದ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleShakti Scheme: ವಿಶ್ವದಾಖಲೆಗೆ ಸೇರಿದ ಕರ್ನಾಟಕದ ‘ಶಕ್ತಿ’ ಯೋಜನೆ
Next articleKarnataka Weather: ಕರ್ನಾಟಕದಲ್ಲಿ ಆ.20ರಿಂದ ಮಳೆ ಆರ್ಭಟ ಕಡಿಮೆ

LEAVE A REPLY

Please enter your comment!
Please enter your name here