Home Advertisement
Home ನಮ್ಮ ಜಿಲ್ಲೆ ಹಾವೇರಿ ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ: PM ಆರೋಪಕ್ಕೆ CM ತಿರುಗೇಟು

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ: PM ಆರೋಪಕ್ಕೆ CM ತಿರುಗೇಟು

0
121

ಕ್ಷೇತ್ರ ಮರುವಿಂಗಡನೆ ದಕ್ಷಿಣಕ್ಕೆ ಅನ್ಯಾಯ: ಸಿದ್ದರಾಮಯ್ಯ ಎಚ್ಚರಿಕೆ

ಹಾವೇರಿ/ರಾಣೇಬೆನ್ನೂರು: ಮಹಿಳಾ ಮೀಸಲಾತಿ ಮಸೂದೆ ಕುರಿತ ರಾಜಕೀಯ ವಾಕ್ಸಮರ ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿ ಅಲ್ಲ ಎಂದು ಪುನರುಚ್ಚರಿಸಿದ್ದಾರೆ. ಕ್ಷೇತ್ರ ಮರುವಿಂಗಡನೆ ವಿಚಾರಕ್ಕೆ ಮಾತ್ರ ತಮ್ಮ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ರಾಣೇಬೆನ್ನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು,

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ನಾವು ಮಹಿಳಾ ಮೀಸಲಾತಿ ಪರವಾಗಿದ್ದೇವೆ.

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: 2023ರಲ್ಲಿಯೇ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿರುವುದನ್ನು ಉಲ್ಲೇಖಿಸಿದರು. ಆದರೆ ಪ್ರಸ್ತುತ ಮಸೂದೆಯಲ್ಲಿ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದಲ್ಲದೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರವೇ ಎಂಬುದನ್ನು ನೆನಪಿಸಿದರು. “ಸಂವಿಧಾನದ 73 ಮತ್ತು 74ನೇ ತಿದ್ದುಪಡಿ ಮೂಲಕ ಮಹಿಳೆಯರಿಗೆ 33% ಮೀಸಲಾತಿ ನೀಡಿದದ್ದು ರಾಜೀವ ಗಾಂದಿ ಕಾಲದಲ್ಲೇ. ಬಿಜೆಪಿ ಆಗ ಈ ವಿಚಾರದಲ್ಲಿ ಒತ್ತಾಯ ಮಾಡಿರಲಿಲ್ಲ,” ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಮಹಿಳಾ ಮೀಸಲಾತಿ ವಿಚಾರದಲ್ಲಿ ಆರೋಪ ಮಾಡುತ್ತಿರುವುದನ್ನು ಖಂಡಿಸಿದ ಸಿದ್ದರಾಮಯ್ಯ, “ಕಾಂಗ್ರೆಸ್ ಮಹಿಳಾ ವಿರೋಧಿ ಎಂಬುದು ಸುಳ್ಳು. ಚುನಾವಣೆ ಹಿನ್ನೆಲೆ ರಾಜಕೀಯ ಲಾಭ ಪಡೆಯಲು ಈ ಆರೋಪ ಮಾಡಲಾಗುತ್ತಿದೆ,” ಎಂದು ಪ್ರತಿಕ್ರಿಯಿಸಿದರು.

ಮಸೂದೆ ಜಾರಿಗೆ ಸಂಬಂಧಿಸಿದ ತಾಂತ್ರಿಕ ಅಂಶಗಳನ್ನು ವಿವರಿಸಿದ ಅವರು, ಸಂವಿಧಾನ ತಿದ್ದುಪಡಿಗೆ ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ ಅಗತ್ಯವಿದ್ದು, ಕನಿಷ್ಠ 50% ರಾಜ್ಯಗಳ ಒಪ್ಪಿಗೆಯೂ ಬೇಕು ಎಂದು ಹೇಳಿದರು. “ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ ಯಾರೂ ವಿರೋಧಿಸಿರಲಿಲ್ಲ,” ಎಂದು ಅಭಿಪ್ರಾಯಪಟ್ಟರು.