ಕಬ್ಬಿನ ದರ ನಿಗದಿ ಕಗ್ಗಂಟು: ಹಾವೇರಿಯಲ್ಲಿ ರೈತರ ಆಕ್ರೋಶ ಸ್ಫೋಟ

ಹಾವೇರಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವಿನ ಹಗ್ಗಜಗ್ಗಾಟ ಸೋಮವಾರ ರಾತ್ರಿವರೆಗೂ ಮುಂದುವರೆದಿದ್ದು, ಸಂಜೆಯಾದರೂ ಸಂಧಾನ ಸಭೆ ಒಮ್ಮತಕ್ಕೆ ಬಾರದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಸ್ಫೋಟಗೊಂಡಿತು. ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯದ್ವಾರದ ಗೇಟ್ ಹಾರಿ ಒಳನುಗ್ಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ಮಾಲೀಕರ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಸಭೆಗೆ ಆಗಮಿಸಿದರು. … Continue reading ಕಬ್ಬಿನ ದರ ನಿಗದಿ ಕಗ್ಗಂಟು: ಹಾವೇರಿಯಲ್ಲಿ ರೈತರ ಆಕ್ರೋಶ ಸ್ಫೋಟ