ಬೆಂಗಳೂರು: ಮಾಸಿಕ ಗೌರವಧನ 8 ಸಾವಿರ ದಿಂದ 15000 ಹಾಗೂ ಬಾಕಿ ಪ್ರೋತ್ಸಾಹಧನ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಇಂದು ಏಳನೇ ದಿನಕ್ಕೆ ಕಾಲಿಟ್ಟಿದ್ದೆ. ಗುಲಾಬಿ ಪಡೆಗೆ ಇಂದು ಸರ್ಕಾರದಿಂದ ಆಶಾಭಾವನೆ ಮೂಡಿದೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಅಹೋರಾತ್ರಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಮೈಕೊರೆಯುವ ಚಳಿಗೆ, ಪ್ರತಿಭಟನಾ ಸ್ಥಳದಲ್ಲಿ ಕುಡಿಯುವ ನೀರಿನ ಕೊರತೆ, ಶೌಚಾಲಯದ ಹಾಗೂ ವಿಶ್ರಾಂತಿ ವ್ಯವಸ್ಥಗಳ ಕೊರತೆಯಿಂದ ಹಲವರ ಆರೋಗ್ಯದಲ್ಲಿ ಏರುಪೇರಾಗಿ 17 ಮಂದಿ ಆಶಾ ಕಾರ್ಯರ್ತೆಯರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಿಎಂ ಡಿ.ಕೆ ಶಿವಕುಮಾರ ಆರ್ಥಿಕ ಇಲಾಖೆ ಸೇರಿದಂತೆ ಸಂಬಂಧ ಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಅಧಿವೇಶನದ ಮುಕ್ತಾಯದ ವೇಳೆಗೆ ಈ ಬಗ್ಗೆ ಅಂತಿಮ ತಿರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸದರು. ಹೀಗಾಗಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಅಂತ್ಯಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯ ಸ್ಪಂದನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.




















