Home ನಮ್ಮ ಜಿಲ್ಲೆ ದಾವಣಗೆರೆ ಗೋಮಾಂಸ ರಫ್ತು: ವಿಶ್ವದಲ್ಲೇ ಭಾರತಕ್ಕೆ ಎರಡನೇ ಸ್ಥಾನ

ಗೋಮಾಂಸ ರಫ್ತು: ವಿಶ್ವದಲ್ಲೇ ಭಾರತಕ್ಕೆ ಎರಡನೇ ಸ್ಥಾನ

0

ದಾವಣಗೆರೆ: “ಗೋಮಾಂಸ ರಫ್ತುವಿನಲ್ಲಿ ಭಾರತವು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ, ಗೋಮಾಂಸ ನಿಷೇಧದ ಬಗ್ಗೆ ಮಾತನಾಡುವ ಬಿಜೆಪಿಗೆ ಇದನ್ನು ತಡೆಯಲು ಈವರೆಗೆ ಏಕೆ ಸಾಧ್ಯವಾಗಿಲ್ಲ” ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೋಮಾಂಸ ಉತ್ಪಾದನೆಯಲ್ಲಿ ಉತ್ತರಪ್ರದೇಶ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಗೋಮಾಂಸ ನಿಷೇಧದ ಬಗ್ಗೆ ಮಾತನಾಡುವ ಬಿಜೆಪಿ ಅದನ್ನು ತಡೆಯಲು ಸಾಧ್ಯ ಆಗಿಲ್ಲ” ಎಂದು ಟೀಕಿಸಿದರು.

“ದೇಶದ 20 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಗೋಮಾತೆಯ ಜಪ ಮಾಡುವ ಮುಖ್ಯಮಂತ್ರಿಯನ್ನು ಹೊಂದಿದ ಉತ್ತರಪ್ರದೇಶದಲ್ಲಿ ಗೋಮಾಂಸಕ್ಕೆ ಕಡಿವಾಣ ಬಿದ್ದಲ್ಲ. ನಾಯಿಗೆ ಪೌಷ್ಟಿಕಾಂಶಯುಕ್ತ ಆಹಾರದ ಕುರಿತು ಟೀಕೆ ಮಾಡುವ ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಬೇಕಿದೆ” ಎಂದರು.

“ದೇಶದಲ್ಲಿ ರೂ. 45 ಲಕ್ಷ ಕೋಟಿ ತೆರಿಗೆ ಸಂಗ್ರಹದ ಬೇಡಿಕೆ ಇದೆ. ಇದರಲ್ಲಿ ಶೇ. 20ರಷ್ಟು ಸಾಧನೆ ಮಾಡಲು ಕೂಡ ಕೇಂದ್ರಕ್ಕೆ ಸಾಧ್ಯವಾಗಿಲ್ಲ. ಆಡಳಿತ, ಪ್ರಗತಿ ಮತ್ತು ಅಭಿವೃದ್ಧಿ ಶೂನ್ಯವಾಗಿದೆ. ಬಂಡವಾಳಶಾಹಿಗಳ ರೂ. 16.5 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಹೆಸರಿನಲ್ಲಿ ಮನ್ನಾ ಮಾಡಲಾಗಿದೆ. ಸಣ್ಣ ವ್ಯಾಪಾರಿ ಹಾಗೂ ರೈತರ ಸಾಲ ಮನ್ನಾ ಮಾಡುತ್ತಿಲ್ಲ” ಎಂದು ಹೇಳಿದರು.

“ಖೇಲೊ ಇಂಡಿಯಾದ ಅಡಿಯಲ್ಲಿ ಗುಜರಾತಿಗೆ 600 ಕೋಟಿ ನೀಡಲಾಗಿದೆ. ಉತ್ತರಪ್ರದೇಶಕ್ಕೆ 400 ಕೋಟಿ ಹಂಚಿಕೆಯಾಗಿದೆ. ಈ ರಾಜ್ಯಗಳಲ್ಲಿ ಒಬ್ಬರೇ ಒಬ್ಬರು ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಂಡ ನಿದರ್ಶನ ಇಲ್ಲ. ಆದರೆ, ಅತಿ ಹೆಚ್ಚು ಕ್ರೀಡಾ ಪದಕ ಗೆದ್ದ ಪಂಜಾಬ್ ಮತ್ತು ಹರಿಯಾಣಕ್ಕೆ ಕಡಿಮೆ ಅನುದಾನ ನೀಡಲಾಗಿದೆ” ಎಂದರು.

Exit mobile version