ಕೊಡಗು: ಬಳ್ಳಾರಿ, ಕೊಡಗು, ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದಿದೆ. ಎರಡೂ ಜಿಲ್ಲೆಗಳಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ. ಆಸಕ್ತರು ಮೇಳದಲ್ಲಿ ಪಾಲ್ಗೊಳ್ಳಬಹುದು.
ಆಗಸ್ಟ್ 18ರಂದು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯಿಂದ ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮಡಿಕೇರಿಯ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾರ್ಟ್ ಮಡಿಕೇರಿ, ಎಚ್‍ಡಿಎಫ್‍ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಮುತ್ತೂಟ್ ಫೈನಾನ್ಸ್ ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಪಾಲ್ಗೊಳ್ಳಲಿದ್ದಾರೆ.
ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು.
ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8296020826.
ಆಗಸ್ಟ್ 23ರಂದು ಉದ್ಯೋಗ ಮೇಳ: ಬಳ್ಳಾರಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಮರ್ಥನ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 23ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಬಳ್ಳಾರಿ ನಗರದ ಎಸ್.ಎನ್.ಪೇಟೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಇಲ್ಲಿ ವಿಶೇಷಚೇತನರಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಅದೇ ದಿನ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್ 16ನೇ ಮುಖ್ಯರಸ್ತೆಯ ಬಿಇ.ಎಸ್.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿಯೂ ಸಹ ವಿಶೇಷಚೇತನರಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 9480812121, 9449864693, 08068333999, 9148793888, 8152808563, 9148792888 ಸಂಖ್ಯೆಗೆ ಕರೆ ಮಾಡಿ.
ಮೊಬೈಲ್ ರಿಪೇರಿ ತರಬೇತಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಸೆಪ್ಟೆಂಬರ್ 1 ರಿಂದ ಆಯೋಜಿಸಲಾಗಿದೆ.
ಆಸಕ್ತ ಗ್ರಾಮೀಣ ಭಾಗದ ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9481506564, 9380162042, 9113880324 ಅನ್ನು ಸಂಪರ್ಕಿಸಿ.