Home ನಮ್ಮ ಜಿಲ್ಲೆ ಬಳ್ಳಾರಿ, ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ, ಅಭ್ಯರ್ಥಿಗಳಿಗೆ ವಿವರಗಳು

ಬಳ್ಳಾರಿ, ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ, ಅಭ್ಯರ್ಥಿಗಳಿಗೆ ವಿವರಗಳು

0

ಬಳ್ಳಾರಿ: ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳು ಉದ್ಯೋಗ ಹುಡುಕುವವರಿಗೆ ಅನುಕೂಲ ಕಲ್ಪಿಸಿವೆ. ಬಳ್ಳಾರಿಯಲ್ಲಿ ಜುಲೈ 18ರಂದು ಉದ್ಯೋಗ ಮೇಳ ಮತ್ತು ಕೊಪ್ಪಳದಲ್ಲಿ ಜುಲೈ 19ರಂದು ನೇರ ಸಂದರ್ಶನ ನಡೆಯಲಿದೆ.

ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜುಲೈ 18ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಿದೆ.

ನಗರದ ಸ್ಪಂದನ ಸ್ಫೂರ್ತಿ ಮೈಕ್ರೋಫೈನಾನ್ಸ್ ಕಂಪನಿ ಇದರಲ್ಲಿ ಪಾಲ್ಗೊಳ್ಳಲಿದ್ದು, ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವರು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ಈ ಉದ್ಯೋಗ ಮೇಳದಲ್ಲಿ ಪಿಯುಸಿ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಆಗಮಿಸಬೇಕು. ಹೆಚ್ಚಿನ ಮಾಹಿತಿಗಾಗಿ 9742718891, 9663263086, 9900827768 ಸಂಖ್ಯೆಗೆ ಕರೆ ಮಾಡಿ.

ಕೊಪ್ಪಳದಲ್ಲಿ ನೇರ ಸಂದರ್ಶನ: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜುಲೈ 19ರಂದು ನೇರ ಸಂದರ್ಶನ ಆಯೋಜನೆ ಮಾಡಿದೆ. ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದಾರೆ. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶ.

ನೇರ ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ವಯೋಮಿತಿ 18 ರಿಂದ 30 ವರ್ಷಗಳು. ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್‌ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು.

NO COMMENTS

LEAVE A REPLY

Please enter your comment!
Please enter your name here

Exit mobile version