ಕಲಬುರಗಿ: ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕಲಬುರಗಿಯ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದ ಮಠಾಧೀಶರು ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರಿಗೆ ಬರೆದ ಪತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಹಾಗೂ ಮಹಾಸಭಾದ ರಾಜ್ಯಾಧ್ಯಕ್ಷ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಸುಮಾರು 10 ರಿಂದ 15 ಸ್ವಾಮೀಜಿಗಳು ಸೋಮವಾರ ನಗರದಲ್ಲಿ ಸಭೆ ಸೇರಿ ಮನವಿ ಪತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
ಶೀಘ್ರದಲ್ಲಿ ದೆಹಲಿಗೆ ನಿಯೋಗ ತೆರಳಿ ಹೈಕಮಾಂಡಗೆ ಭೇಟಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಮನವರಿಕೆ ಮಾಡುತ್ತೇವೆ ಎಂದಿದ್ದಾರೆ.
ಡಿಕೆಶಿ ಅವರನ್ನು ಸಿಎಂ ಮಾಡದೆ ಇದ್ದರೆ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿಳುತ್ತೆ ಮತ್ತು ಪಕ್ಷ ಸರ್ವನಾಶ ಆಗಿ ಹೋಗುತ್ತದೆ ಎಂದು ಪ್ರಣವಾನಂದ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.























