SK Home Ad
Home ನಮ್ಮ ಜಿಲ್ಲೆ ಕಲಬುರಗಿ ಸಿಎಂ ಬದಲಾವಣೆಗೆ ದಿನಾಂಕ ನಿಗದಿಯಾಗಿಲ್ಲ

ಸಿಎಂ ಬದಲಾವಣೆಗೆ ದಿನಾಂಕ ನಿಗದಿಯಾಗಿಲ್ಲ

0
178

ಕಲಬುರಗಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸದ್ಯಕ್ಕೆ ಯಾವ ಚರ್ಚೆಗಳು ನಡೆದಿಲ್ಲ, ಇದಕ್ಕಾಗಿ ಯಾವ ದಿನಾಂಕವೂ ನಿಗದಿಯಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪದೇ ಪದೇ ಪ್ರಶ್ನೆ ಕೇಳಬೇಡಿ. ಈ ಬಗ್ಗೆ ಯಾವುದೇ ಊಹಾಪೋಹಗಳನ್ನು ಮಾಧ್ಯಮಗಳು ಸೃಷ್ಟಿಸಬಾರದು ಎಂದು ಮನವಿ ಮಾಡಿದರು.

ಸಿಎಂ ಬದಲಾವಣೆಯ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಸಮಯ ನಿಗದಿಯಾಗದೆ ಈ ಕ್ಷಣದಲ್ಲೇ ಬದಲಾವಣೆ ಆಗುತ್ತದೆಯೋ ಇಲ್ಲವೋ ಹೇಳಲು ಸಾಧ್ಯವಿಲ್ಲ. ನಾನು, ಸೋನಿಯಾ, ರಾಹುಲ್ ಸೇರಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.