SK Home Ad
Home ನಮ್ಮ ಜಿಲ್ಲೆ ಕಲಬುರಗಿ ಕರ್ತವ್ಯನಿರತ ಪೇದೆ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ

ಕರ್ತವ್ಯನಿರತ ಪೇದೆ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ

0
9

ಕಲಬುರಗಿ: ಕರ್ತವ್ಯನಿರತ ಸಿಎಆರ್ ಪೊಲೀಸ್ ಪೇದೆಯೊಬ್ಬರು ಪೊಲೀಸ್ ವಾಹನದಲ್ಲೇ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೃದಯ ಭಾಗದ ಜಗತ್ ವೃತ್ತದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ್ ಮಾವನೂರ (32) ಆತ್ಮಹತ್ಯೆ ಮಾಡಿಕೊಂಡ ಸಿಎಆರ್ ಪೇದೆ ಎಂದು ಗುರುತಿಸಲಾಗಿದೆ. 2016ರ ಬ್ಯಾಚ್ ನ ಪೇದೆಯಾಗಿದ್ದು, ಕರ್ತವ್ಯ ನಿರ್ವಹಿಸಲು ನೀಡಿದ 303 ರೈಫಲ್ ನಿಂದ ಶೂಟ್ ಮಾಡಿಕೊಂಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಬೆಂಗಳೂರಿನಿಂದ ಕಲಬುರಗಿಗೆ ವರ್ಗಾವಣೆಯಾಗಿದ್ದ ಎಂದು ಹೇಳಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಡಿಸಿಪಿಗಳಾದ ಶಾಲೂ, ಪ್ರವೀಣ ನಾಯಕ, ಎಸಿಪಿ ಶರಣಪ್ಪ ಸುಬೇದಾರ, ಪಿಐ ಮಹಾಂತೇಶ ಪಾಟೀಲ್, ಆರ್ ಪಿಐ ಮಹಾದೇವ ಪಾಟೀಲ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ನಗರದ ರಾಮ ಮಂದಿರದ ಬಳಿ ಸ್ವಂತ ಮನೆ ಹೊಂದಿದ್ದಾರೆ. ಮಂಗಳವಾರ ಸಂಜೆ 9ಗಂಟೆ ಸುಮಾರಿಗೆ ಕರ್ತವ್ಯ ನಿರತ ವಾಹನದಲ್ಲೆ ರೈಫಲ್ ನಿಂದ ಶೂಟ್ ಮಾಡಿಕೊಂಡಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ವೈಯಕ್ತಿಕ ಕಾರಣ ಎಂದು ತಿಳಿದು ಬಂದಿದ್ದು, ಕುಟುಂಬಸ್ಥರು ನೀಡುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.