ಪಿಎಸ್ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲಗೆ ಮಧ್ಯಂತರ ಜಾಮೀನು

0
35

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಆಗಿರುವ ಆರ್.ಡಿ. ಪಾಟೀಲಗೆ ಸುಪ್ರೀಂಕೋರ್ಟ್ ಮೂರು ವಾರಗಳ ಮಧ್ಯಂತರ ‌ಜಾಮೀನು ಮಂಜೂರು ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಮಗಳ ಮದುವೆಗೆ ಧಾರ್ಮಿಕ ವಿಧಿವಿಧಾನಗಳನ್ನು ಡಿ. 4ರೊಳಗೆ ಪೂರೈಸಬೇಕಾದ ಹಿನ್ನೆಲೆಯಲ್ಲಿ ಆರೋಪಿ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ವಿನೋದ್ ಚಂದ್ರ ಏಕ ಸದಸ್ಯ ನ್ಯಾಯಪೀಠವು ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಈಗಾಗಲೇ ಸಲ್ಲಿಕೆಯಾಗಿದ್ದು, ಪ್ರಕರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಾಕ್ಷಿದಾರರು ಇರುವುದರಿಂದ ವಿಚಾರಣೆಗೆ ಇನ್ನು ಸಾಕಷ್ಟು ಕಾಲಾವಕಾಶ ಬೇಕಾಗಿರುವುದರಿಂದ ಆರೋಪಿಗೆ ಮಧ್ಯಂತರವಾಗಿ ಮೂರು ವಾರಗಳ ಕಾಲ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ.

ಜಾಮೀನು ಅವಧಿ ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

Previous articleಕರ್ನಾಟಕ ಗಡಿ ಬದಲು: 369 ಹೊಸ ವಾರ್ಡ್‌ಗಳು ಸೇರ್ಪಡೆ, ಇಲ್ಲಿದೆ ಸಂಪೂರ್ಣ ಮಾಹಿತಿ
Next articleಧರ್ಮಸ್ಥಳ ಪ್ರಕರಣ:‌ ಬೆಳ್ತಂಗಡಿ ಕೋರ್ಟ್‌ಗೆ 3,923 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

LEAVE A REPLY

Please enter your comment!
Please enter your name here