Home Advertisement
Home ನಮ್ಮ ಜಿಲ್ಲೆ ಕಲಬುರಗಿ ಕಲಬುರಗಿಯಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ

ಕಲಬುರಗಿಯಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ

0
80

ಕಲಬುರಗಿ: ನಗರದಲ್ಲಿ ಹಗಲು ರಾತ್ರಿಯೆನ್ನದೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಇದೀಗ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ನಿವೃತ್ತ ಸೈನಿಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ಬಳಿ ಭಾನುವಾರ ನಡೆದಿದೆ.

​ಆಳಂದ ತಾಲೂಕಿನ ಹಡಲಗಿ ಗ್ರಾಮದ ನಿವಾಸಿ ರವಿಚಂದ್ರ ಖೇಡ್ (45) ಕೊಲೆಯಾದ ದುರ್ದೈವಿ. ಇವರು ಕಳೆದ ನಾಲ್ಕು ವರ್ಷಗಳ ಹಿಂದಷ್ಟೇ ಬಿಎಸ್‌ಎಫ್‌ (BSF) ಪಡೆಯಿಂದ ನಿವೃತ್ತರಾಗಿದ್ದರು. ಸದ್ಯ ಕಲಬುರಗಿಯ ಇಂಡಿಯನ್ ಆಯಿಲ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

​ನಗರದ ರಾಮ ಮಂದಿರದ ಬಳಿ ಇರುವ ವಿವಾದಿತ ಖಾಸಗಿ ಜಾಗವೊಂದರಲ್ಲಿ ಈ ಭೀಕರ ಕೊಲೆ ನಡೆದಿದೆ. ದುಷ್ಕರ್ಮಿಗಳು ರವಿಚಂದ್ರ ಅವರ ತಲೆಗೆ ಕಬ್ಬಿಣದ ರಾಡ್‌ನಿಂದ ಬಲವಾಗಿ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಜಾಗದ ವಿವಾದವೇ ಈ ಕೊಲೆಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆನಾದರೂ ವೈಷಮ್ಯ ಅಡಗಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕಿದೆ. ಘಟನಾ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.