SK Home Ad
Home ನಮ್ಮ ಜಿಲ್ಲೆ ಕಲಬುರಗಿ ಭೀಕರ ಅಪಘಾತ: ಲಾರಿ-ಬೈಕ್ ಡಿಕ್ಕಿಯಲ್ಲಿ 3 ಯುವಕರ ದುರ್ಮರಣ

ಭೀಕರ ಅಪಘಾತ: ಲಾರಿ-ಬೈಕ್ ಡಿಕ್ಕಿಯಲ್ಲಿ 3 ಯುವಕರ ದುರ್ಮರಣ

0
282

ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಲಾರಿ ಮತ್ತು ಎರಡು ಬೈಕ್‌ಗಳ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ ಇಡೀ ಪ್ರದೇಶವನ್ನು ಬೆಚ್ಚಿಬೀಳುವಂತೆ ಮಾಡಿದೆ.

ಮೃತರನ್ನು ಸೇಡಂ ನಿವಾಸಿಗಳಾದ ಮಹೇಶ (33), ಸಂಜು (28) ಹಾಗೂ ಕಾಶಿನಾಥ್ (18) ಎಂದು ಗುರುತಿಸಲಾಗಿದೆ. ಇವರು ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಪಘಾತ ಹೇಗೆ ಸಂಭವಿಸಿತು? : ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗದಲ್ಲಿ ಬಂದ ಲಾರಿ ಎದುರಿನಿಂದ ಬರುತ್ತಿದ್ದ ಬೈಕ್‌ಗಳಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯಗಳು ಅತ್ಯಂತ ಭೀಕರವಾಗಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಾಲಕ ಪರಾರಿ – ತನಿಖೆ ಆರಂಭ : ಅಪಘಾತದ ಬಳಿಕ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ತಕ್ಷಣ ಸೇಡಂ ಪೊಲೀಸಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಾರಿಯಾದ ಚಾಲಕನ ಪತ್ತೆಗೆ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಆರಂಭಿಸಲಾಗಿದೆ.