SK Home Ad
Home ನಮ್ಮ ಜಿಲ್ಲೆ ಕಲಬುರಗಿ ಈಶಾನ್ಯ ಶಿಕ್ಷಕರ ಕ್ಷೇತ್ರ ಮತ ಎಣಿಕೆಗೆ ಸ್ಟ್ರಾಂಗ್‌ರೂಂ ಓಪನ್

ಈಶಾನ್ಯ ಶಿಕ್ಷಕರ ಕ್ಷೇತ್ರ ಮತ ಎಣಿಕೆಗೆ ಸ್ಟ್ರಾಂಗ್‌ರೂಂ ಓಪನ್

0
128

ಕಲಬುರಗಿ: ಮೇಲ್ಮನೆಯ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ಸಿದ್ಧತೆ ಶುರುವಾಗಲಿದೆ.

ಮತ ಎಣಿಕೆ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ., ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಡಿಸಿ ಇಕ್ರಮ ಶರೀಫ್, ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ ಹಾಗೂ ಅಭ್ಯರ್ಥಿಗಳು ಮತ್ತು ಅವರ ಚುನಾವಣಾ ಏಜೆಂಟ್‌ಗಳ ಸಮ್ಮುಖದಲ್ಲಿ ಸ್ಟ್ರಾಂಗ್‌ರೂಂ ತೆರೆಯಲಾಯಿತು. ಬಳಿಕ ಮತಪೆಟ್ಟಿಗೆಗಳನ್ನು ತೆರೆದು ಮತಪತ್ರಗಳನ್ನು ಬಂಡ್ಲಿಂಗ್ ಮಾಡುವ ಪ್ರಕ್ರಿಯೆ ಆರಂಭಿಸಲಾಯಿತು.

ಒಟ್ಟು 144 ಮತಪೆಟ್ಟಿಗೆಗಳನ್ನು ತೆರೆದು ಮತಪತ್ರಗಳ ಬಂಡ್ಲಿಂಗ್ ಪೂರ್ಣಗೊಳಿಸಿದ ನಂತರ ಬ್ಯಾರೆಲ್‌ನಲ್ಲಿ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ನಡೆಯಲಿದೆ.

ಕಣದಲ್ಲಿರುವ 13 ಅಭ್ಯರ್ಥಿಗಳು

ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶೀಲ್ ಜಿ. ನಮೋಶಿ, ಆಮ್ ಆದ್ಮಿ ಪಕ್ಷದಿಂದ ಸೈಬಣ್ಣ ಜಮಾದಾರ ಹಾಗೂ ಜನತಾ ದಳ (ಸಂಯುಕ್ತ) ಪಕ್ಷದಿಂದ ಶಂಕರೆಡ್ಡಿ ಪಾಟೀಲ ಸೇರಿ ಇತರೆ ಪಕ್ಷೇತರರು ಸ್ಪರ್ಧಿಸಿದ್ದಾರೆ.