Home Advertisement
Home ನಮ್ಮ ಜಿಲ್ಲೆ ಕಲಬುರಗಿ ನಕಲು ತಡೆದ ಶಿಕ್ಷಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ

ನಕಲು ತಡೆದ ಶಿಕ್ಷಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ

0
173

ಕಲಬುರಗಿ: ಬಿಎಚ್‌ಎಂಎಸ್ ನಾಲ್ಕನೇ ಸೆಮಿಸ್ಟರ್‌ನ ಆಂತರಿಕ ಪರೀಕ್ಷೆಯಲ್ಲಿ ನಕಲಿನಲ್ಲಿ ತಲ್ಲೀನರಾಗಿದ್ದ ವಿದ್ಯಾರ್ಥಿಗೆ ತಡೆದಿದ್ದ ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಲ್ಲೆಗೈದ ಘಟನೆ ನಗರದ ಡಾ. ಮಾಲಕರಡ್ಡಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ಈಚೆಗೆ ನಡೆದಿದ್ದು, ಈ ವಿಡಿಯೋ ವೈರಲ್ ಆಗಿದೆ.

ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಮೇಲೆ ಆಂತರಿಕ ಪರೀಕ್ಷೆ ವೇಳೆ ಶಹಬಾಜ್ ಎಂಬ ವಿದ್ಯಾರ್ಥಿಯು ಮೊಬೈಲ್ ಪೋನ್ ಬಳಿಸಿ ನಕಲು ಮಾಡಲು ಪ್ರಯತ್ನಿಸಿದ್ದ. ಇದನ್ನು ಗಮನಿಸಿದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ ಅವರು ವಿದ್ಯಾರ್ಥಿಯನ್ನು ಪ್ರಶ್ನಿಸಿ ಉತ್ತರ ಪತ್ರಿಕೆ ವಶಕ್ಕೆ ತೆಗೆದುಕೊಂಡು ಆತನಿಗೆ ತರಗತಿಯಿಂದ ಹೊರಹೋಗುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಹಳೇ ಹಂಡೆಯಲ್ಲಿ ಚಾಕಲೇಟ್‌ ಇಟ್ಟು ನಿಧಿ ಎಂದಿದ್ದ ಮೌಲ್ವಿ ಅರೆಸ್ಟ್‌

ಇದರಿಂದಾಗಿ ಆಕ್ರೋಶಗೊಂಡ ವಿದ್ಯಾರ್ಥಿ ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಆ ವಿಡಿಯೋ ಈಗ ತುಂಬಾ ವೈರಲ್ ಆಗಿದೆ. ತಕ್ಷಣಕ್ಕೆ ಇತರೆ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದು, ನಕಲು ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದಿಂದ ಹೊರನಡೆದಿದ್ದಾನೆ.

ಘಟನೆ ನಡೆದ ದಿನದಂದೇ ಠಾಣೆಗೆ ಕರೆಯಿಸಿ ವಿಚಾರಿಸಲಾಗಿದೆ. ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯು ಆಂತರಿಕ ತನಿಖೆ ನಡೆಸುತ್ತಿದ್ದು, ಆಡಳಿತ ಮಂಡಳಿಯು ವಿದ್ಯಾರ್ಥಿ ಭವಿಷ್ಯದ ದೃಷ್ಟಿಯಿಂದ ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಕಾಲೇಜು ಹಂತದಲ್ಲಿ ಶಿಸ್ತು ಕ್ರಮಕೈಗೊಳ್ಳವ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಳ್ಳಲು ವಿಳಂಬವಾಗಿದೆ. ಈಗ ಸ್ಥಳೀಯ ಬ್ರಹ್ಮಪುರ ಪೊಲೀಸ್ ಠಾಣೆಯವರಿಗೆ ದೂರು ದಾಖಲಿಸುವಂತೆ ಸೂಚಿಸಿದ್ದೇನೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು `ಸಂಯುಕ್ತ ಕರ್ನಾಟಕ’ಕ್ಕೆ ತಿಳಿಸಿದರು.