ಕಲಬುರಗಿ: ಎಂಓಬಿ ಬಳಿ ಲಂಚ ಪಡೆಯುತ್ತಿದ್ದ ವೇಳೆ ಪೊಲೀಸ್ ಪೇದೆಗಳಿಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಓರ್ವ ಪರಾರಿಯಾಗಿದ್ದ, ಇನ್ನೊಬ್ಬ ಪೇದೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಗುರುವಾರ ನಡೆದಿದ್ದು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕಲಬುರಗಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ನಗರದ ಬ್ರಹ್ಮಪೂರ ಪೊಲೀಸ್ ಠಾಣೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪೇದೆಗಳಾದ ಪರಶುರಾಮ್, ಲೋಕಾ ಬಲೆಗೆ ಬಿದ್ದಿದ್ದು, ಮತ್ತೊಬ್ಬ ಪೇದೆ ವೀರೇಶ ಪರಾರಿಯಾಗಿದ್ದಾನೆ.
20 ಸಾವಿರ ಹಣ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಪರಶುರಾಮ ಬಲೆಗೆ ಬಿದ್ದಿದ್ದಾನೆ. ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಪೇದೆಗಳಾಗಿ ಇಬ್ಬರು ಕಾರ್ಯನಿರ್ವಹಿಸುತ್ತಿದ್ದರು. ಒಂದು ವೇಳೆ ಹಣ ಕೊಡದಿದ್ದರೆ ಗಡಿಪಾರು ಮಾಡುವ ಬಗ್ಗೆ ಎಚ್ಚರಿಕೆ ನೀಡಿದ್ದರಿಂದ ಲಂಚ ನೀಡಲು ಒಪ್ಪಿಗೆ ಸೂಚಿಸಿದರು.






















