Home ನಮ್ಮ ಜಿಲ್ಲೆ ಕರ್ನಾಟಕ ಮುಂಗಾರು ಅಧಿವೇಶನ: 18 ಶಾಸಕರ ಅಮಾನತು ವಾಪಸ್

ಕರ್ನಾಟಕ ಮುಂಗಾರು ಅಧಿವೇಶನ: 18 ಶಾಸಕರ ಅಮಾನತು ವಾಪಸ್

0

ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್​ ಆದೇಶಿಸಿದ್ದರು. ಈಗ ಆ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿದೆ ಎಂದು ಸದನಕ್ಕೆ ಕಾನೂನು ಸಚಿವ ಹೆಚ್​.ಕೆ.ಪಾಟೀಲ್​ ಮುಂಗಾರು ಅಧಿವೇಶನದ ಮೊದಲ ದಿನ ತಿಳಿಸಿದರು.

ಕರ್ನಾಟಕ ವಿಧಾಸಭೆ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮೊದಲ ದಿನ ಸಂತಾಪ ಸೂಚನಾ ನಿರ್ಣಯದ ನಂತರ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌ ಬಿಜೆಪಿ 18 ಶಾಸಕರನ್ನು ಆರು ತಿಂಗಳ ಅಮಾನತ್ತು ಮಾಡಲಾಗಿತ್ತು. ಅಮಾನತ್ತುಗೊಳಿಸಿದ ನಿರ್ಣಯವನ್ನು ಮೇ 25ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಇದಕ್ಕೆ ಸದನ ಅನುಮೋದನೆ ನೀಡಬೇಕು ಎಂದು ಕೋರಿದರು. ಸ್ಪೀಕರ್ ಯು.ಟಿ.ಖಾದರ್‌ ಮತಕ್ಕೆ ಹಾಕಿದಾಗ ಧ್ವನಿಮತದ ಮೂಲಕ ಅನುಮೋದನೆ ದೊರೆಯಿತು.

ಅಮಾನತ ಆಗಿದ್ದ ಶಾಸಕರು: ಬಿಜೆಪಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ. ರಾಮಮೂರ್ತಿ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಸೇರಿದಂತೆ 18 ಶಾಸಕರನ್ನು ಅಮಾನತು ಮಾಡಲಾಗಿತ್ತು.

ಹನಿಟ್ರ್ಯಾಪ್​ ಮತ್ತು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ ಬಿಜೆಪಿ ಶಾಸಕರು ಸ್ಪೀಕರ್ ಯು.ಟಿ ಖಾದರ್ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ​​ ವಿಧಾನಸಭೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಲಾಗಿತ್ತು.

ಮೇ ತಿಂಗಳಲ್ಲಿ ಸಂಧಾನ ಸಭೆ: ಬಿಜೆಪಿಯ 18 ಶಾಸಕರ ಅಮಾನತು ಹಿಂಪಡೆಯುವ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಮೇ ತಿಂಗಳಲ್ಲಿ ಸಂಧಾನ ಸಭೆ ನಡೆದಿತ್ತು. ಸಭೆಯಲ್ಲಿ, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್​. ಅಶೋಕ್, ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಭಾಗಿಯಾಗಿದ್ದರು. ಈ ಸಂಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ತೀರ್ಮಾನಿಸಲಾಗಿತ್ತು.

ಸಂಧಾನ ಸಭೆ ಬಳಿಕ ಮಾತನಾಡಿದ್ದ ಸ್ಪೀಕರ್ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಘಟನೆ ಬಗ್ಗೆ ಎಲ್ಲಾ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಹ ಸಲ್ಲಿಸಿದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಸಂತೋಷದಿಂದ ಶಾಸಕರ ಅಮಾಮತು ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು ಎಂದು ಹೇಳಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version