Home ನಮ್ಮ ಜಿಲ್ಲೆ ಕೋಲಾರ ವಿಶ್ವದಲ್ಲೇ ಕಾಣದ ರಕ್ತದ ಗುಂಪು ಕರ್ನಾಟಕದ ಮಹಿಳೆಯಲ್ಲಿ ಪತ್ತೆ

ವಿಶ್ವದಲ್ಲೇ ಕಾಣದ ರಕ್ತದ ಗುಂಪು ಕರ್ನಾಟಕದ ಮಹಿಳೆಯಲ್ಲಿ ಪತ್ತೆ

0

ಕೋಲಾರ : ವಿಶ್ವದಲ್ಲೇ ಎಲ್ಲಿಯೂ ಗುರುತಿಸಲಾಗದ ವಿಜ್ಞಾನಕ್ಕೆ ವಿಸ್ಮಯ ಎನ್ನಿಸುವ ರಕ್ತದ ಗುಂಪೊಂದು ಜಿಲ್ಲೆಯ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಕೋಲಾರದ ಆಸ್ಪತ್ರೆಯಲ್ಲಿ 38 ವರ್ಷದ ಮಹಿಳೆಯೊಬ್ಬರು ಹೃದಯ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಹೃದಯ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆಯ ಅವರ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿ ಲಭ್ಯವಿರುವ ಯಾವುದೇ O+ ರಕ್ತ ಅವರ ರಕ್ತಕ್ಕೆ ಹೊಂದಾಣಿಕೆಯಾಗುತ್ತಿರಲಿಲ್ಲ. ಹೀಗಾಗಿ ಹೆಚ್ಚಿನ ಪರೀಕ್ಷೆಗಾಗಿ ಅವರ ರಕ್ತದ ಮಾದರಿಯನ್ನು ರೋಟರಿ ಬೆಂಗಳೂರು ಟಿಟಿಕೆ ಬ್ಲಡ್ ಸೆಂಟರ್​​ನಲ್ಲಿರುವ ಅಡ್ವಾನ್ಸ್ಡ್ ಇಮ್ಯುನೊಹೆಮಟಾಲಜಿ ರೆಫರೆನ್ಸ್ ಲ್ಯಾಬೋರೇಟರಿಗೆ ಕಳುಹಿಸಿಕೊಡಲಾಗಿತ್ತು. ಆಗ ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗುವಂತಹ ಸುದ್ದಿಯೊಂದು ಬಂದಿದೆ, ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ ರಕ್ತದ ಗುಂಪು ಆಗಿರದೆ O Rh+ ಆಗಿತ್ತು.

ಮಹಿಳೆಯಲ್ಲಿ ಅತ್ಯಂತ ಅಪರೂಪದ O Rh+ ರಕ್ತದ ಗುಂಪು ಪತ್ತೆಯಾಗುತ್ತಿದಂತೆ, ಶಸ್ತ್ರಚಿಕಿತ್ಸೆಗಾಗಿ ವೈದ್ಯರು ಆಕೆಯ ರಕ್ತಕ್ಕೆ ಹೊಂದಿಕೆಯಾಗುವ ರಕ್ತಕ್ಕಾಗಿ ಹುಡುಕಾಟ ಆರಂಭಿಸಿದ್ದರು. O- ಆಗಲಿ O+ ಪಾಸಿಟಿವ್ ರಕ್ತ ಸೇರಿದಂತೆ ಯಾವುದೇ ರಕ್ತದ ಗುಂಪಿಗೂ ಈಕೆಯ ರಕ್ತ ಹೊಂದಿಕೆಯಾಗುತ್ತಿರಲಿಲ್ಲ, ಬಳಿಕ ಆಸ್ಪತ್ರೆಯು ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೋಟರಿ ಬೆಂಗಳೂರು ಟಿಟಿಕೆ ರಕ್ತ ಕೇಂದ್ರದಲ್ಲಿರುವ ಅಡ್ವಾನ್ಸ್ಡ್ ಇಮ್ಯುನೊಹೆಮಟಾಲಜಿ ರೆಫರೆನ್ಸ್ ಲ್ಯಾಬೋರೇಟರಿಗೆ ನೀಡಿತು. ಸುಧಾರಿತ ಸೆರೋಲಾಜಿಕಲ್ ತಂತ್ರಗಳನ್ನು ಬಳಸಿಕೊಂಡು, ತಂಡವು ಮಹಿಳೆಯ ರಕ್ತವು ‘ಪ್ಯಾನ್ರಿಯಾಕ್ಟಿವ್’ ಎಂದು ಗುರ್ತಿಸಿದೆ.

ಈಕೆಯ ರಕ್ತ ಮಾದರಿ ಯಾವುದೇ ರಕ್ತಕ್ಕೂ ಹೊಂದಿಕೆಯಾಗುವುದಿಲ್ಲ ಎಂದು ಪತ್ತೆ ಮಾಡಿದೆ. ಇದು ಅಪರೂಪದ ಪ್ರಕರಣ ಎಂದು ಗುರ್ತಿಸಲಾಗಿದೆ. ಮಹಿಳೆಯ ರಕ್ತಕ್ಕೆ ಹೊಂದಿಕೆಗಾಗಿ ಆಕೆಯ ಕುಟುಂಬದ 20 ಸದಸ್ಯರ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು. ಆದರೆ, ಯಾವುದೇ ರಕ್ತಕ್ಕೂ ಹೊಂದಿಕೆಯಾಗಲಿಲ್ಲ ಎಂದಿದ್ದಾರೆ.

ಯಾವುದೇ ರಕ್ತಕ್ಕೂ ಹೊಂದಿಕೆಯಾಗದ ಪ್ರಕರಣವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಲಾಯಿತು. ಕುಟುಂಬದ ಸಹಯೋಗದ ಪ್ರಯತ್ನದಿಂದ ರಕ್ತ ವರ್ಗಾವಣೆಯ ಅಗತ್ಯವಿಲ್ಲದೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು ಎಂದು ರೋಟರಿ ಬೆಂಗಳೂರು ಟಿಟಿಕೆ ರಕ್ತ ಕೇಂದ್ರದ ವೈದ್ಯ ಅಂಕಿತ್ ಮಾಥುರ್ ಅವರು ತಿಳಿಸಿದ್ದಾರೆ

ಹತ್ತು ತಿಂಗಳ ವ್ಯಾಪಕ ಸಂಶೋಧನೆ ಮತ್ತು ಆಣ್ವಿಕ ಪರೀಕ್ಷೆಯ ಪರಿಣಾಮವಾಗಿ ತಿಳಿದಿಲ್ಲದ ರಕ್ತದ ಗುಂಪಿನ ಪ್ರತಿಜನಕವನ್ನು ಪತ್ತೆ ಮಾಡಲಾಗಿದೆ ಎಂದು ಡಾ. ಮಾಥುರ್ ಅವರು ತಿಳಿಸಿದ್ದಾರೆ. CRIB ರಕ್ತ ಗುಂಪು ವ್ಯವಸ್ಥೆಯ ಭಾಗವಾಗಿದ್ದು, ಇದರ ಮೂಲವನ್ನು ಗುರುತಿಸಿ ಅಧಿಕೃತವಾಗಿ CRIB ಎಂದು ಹೆಸರಿಸಲಾಗಿದೆ.ಇದು ಕ್ರೋಮರ್ (CR) ರಕ್ತ ಗುಂಪಿನ ಭಾಗವಾಗಿದ್ದು, ಇದರ ಮೂಲವನ್ನು ಗುರುತಿಸಿ ಇದೀಗ ಅಧಿಕೃತವಾಗಿ CRIB ಎಂದು ಹೆಸರಿಸಲಾಗಿದೆ. ‘CR’ ಎಂದರೆ ‘ಕ್ರೋಮರ್’ ಮತ್ತು ‘IB’ ಎಂದರೆ ‘ಭಾರತ’, ‘ಬೆಂಗಳೂರು’. ಜೂನ್ 2025 ರಲ್ಲಿ ಇಟಲಿಯ ಮಿಲನ್‌ನಲ್ಲಿ ನಡೆದ ಅಂತರರಾಷ್ಟ್ರೀಯ ರಕ್ತ ವರ್ಗಾವಣೆ ಸೊಸೈಟಿ (ISBT) ಯ 35 ನೇ ಪ್ರಾದೇಶಿಕ ಕಾಂಗ್ರೆಸ್‌ನಲ್ಲಿ ಈ ಐತಿಹಾಸಿಕ ಘೋಷಣೆಯನ್ನು ಮಾಡಲಾಯಿತು ಎಂದು ವೈದ್ಯ ಅಂಕಿತ್ ಮಾಥುರ್ ತಿಳಿಸಿದ್ದಾರೆ

NO COMMENTS

LEAVE A REPLY

Please enter your comment!
Please enter your name here

Exit mobile version