Home ನಮ್ಮ ಜಿಲ್ಲೆ ಕೊಡಗು ಕೊಡಗು: ಬ್ಯಾಂಕ್‌ನಲ್ಲೇ ನೇಣಿಗೆ ಶರಣಾದ ವ್ಯವಸ್ಥಾಪಕ

ಕೊಡಗು: ಬ್ಯಾಂಕ್‌ನಲ್ಲೇ ನೇಣಿಗೆ ಶರಣಾದ ವ್ಯವಸ್ಥಾಪಕ

0

ಕೊಡಗು ಜಿಲ್ಲೆಯಲ್ಲಿ ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ಘಟನೆ ನಡೆದಿದೆ.

ವಿಜು(46) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಮೂಲತಃ ಕೇರಳದ ಆಲಪುಝ್ಝ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ನ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್‌ನ ಬೆಟ್ಟಗೇರಿ ಶಾಖೆಯಲ್ಲಿ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೊಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version