Home ನಮ್ಮ ಜಿಲ್ಲೆ ಕೊಡಗು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

0

ಮಡಿಕೇರಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.
ವೈಷ್ಣವಿ(13) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮಾ. 13ರಿಂದ ಶಾಲಾ ಪರೀಕ್ಷೆಗಳು ಆರಂಭವಾಗಿದ್ದವು. ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಆದರೆ, ಇಂದು ಭಾನುವಾರ ರಜಾ ದಿನವಾಗಿದ್ದರಿಂದ ಮನೆಯಲ್ಲಿ ವೈಷ್ಣವಿ ಒಬ್ಬಳನ್ನೇ ಓದಿಕೊಳ್ಳುವಂತೆ ಬಿಟ್ಟು ಪಾಲಕರು ಹೊರಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿಯೇ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Exit mobile version