ಕೊಡಗು: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

0
82

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣದಿಂದ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ವಿನಯ್ ಸೋಮಯ್ಯ (39) ಎಂಬವರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ.

ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ಹೆಸರಿನ ವಾಟ್ಸ್​ಆ್ಯಪ್​ ಗ್ರೂಪ್​ನ ಅಡ್ಮಿನ್ ಆಗಿದ್ದರು.

ಇತ್ತೀಚೆಗೆ ಇದೇ ಗ್ರೂಪ್​ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ಒಂದು ವೈರಲ್ ಆಗಿತ್ತು ಎನ್ನಲಾಗಿದೆ. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆ‌ರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್​ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Previous articleವಕ್ಫ್ ಬೋರ್ಡ್‌ನ ನಿರಂಕುಶ ನಡೆಗಳಿಗೆ ಕಡಿವಾಣ
Next articleಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ