ಮಡಿಕೇರಿ: ಕೊಡಗು ಕರ್ನಾಟಕದಲ್ಲಿ ಪ್ರವಾಸಿಗರು ಅತಿ ಹೆಚ್ಚು ಭೇಟಿ ನೀಡುವ ಜಿಲ್ಲೆಗಳಲ್ಲಿ ಒಂದು. ನೈಋತ್ಯ ಮುಂಗಾರು ಮಳೆ ಆರಂಭವಾದ ಬಳಿಕ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ?. ಸದ್ಯ ಹವಾಮಾನ ಹೇಗಿದೆ? ಇಲ್ಲಿದೆ ವಿವರ.
ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24ಗಂಟೆ ಅವಧಿಯಲ್ಲಿ ಸರಾಸರಿ 4.82 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.89 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 2421.76 ಮಿ.ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2411.59 ಮಿ.ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಯಾವ ತಾಲೂಕಿನಲ್ಲಿ ಎಷ್ಟು ಮಳೆ?; ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.25 ಮಿ.ಮೀ. ಕಳೆದ ವರ್ಷ ಇದೇ ದಿನ 12.65 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 3616.62 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 3432.49 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.75 ಮಿ.ಮೀ.. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2186.70 ಮಿ.ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2185.10 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.45 ಮಿ.ಮೀ.. ಕಳೆದ ವರ್ಷ ಇದೇ ದಿನ 0.72 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2266.82 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2245.85 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.65 ಮಿ.ಮೀ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2800.77 ಮಿ.ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2720.96 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಮಳೆಯಾಗಿಲ್ಲ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1237.89 ಮಿ.ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1473.50 ಮಿ.ಮೀ. ಮಳೆಯಾಗಿತ್ತು.
ಹಾರಂಗಿ ಡ್ಯಾಂ ನೀರಿನ ಮಟ್ಟ: ಜಿಲ್ಲೆಯಲ್ಲಿರುವ ಹಾರಂಗಿ ಡ್ಯಾಂ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2857.35 ಅಡಿಗಳು. ಕಳೆದ ವರ್ಷ ಇದೇ ದಿನ 2857.61 ಅಡಿಗಳ ನೀರಿನ ಸಂಗ್ರಹವಿತ್ತು.
ಹಾರಂಗಿಯಲ್ಲಿ ಕಳೆದ 24 ಗಂಟೆಯಲ್ಲಿ ಮಳೆಯಾಗಿಲ್ಲ. ಇಂದಿನ ನೀರಿನ ಒಳಹರಿವು 4704 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1507 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 3083 ಕ್ಯುಸೆಕ್. ನಾಲೆಗೆ 4704 ಕ್ಯುಸೆಕ್.